10:29 PM Thursday 28 - August 2025

ಶಿವಮೊಗ್ಗ: ಎರಡು ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿ: ಇಬ್ಬರು ಸಾವು, 6 ಮಂದಿಯ ಸ್ಥಿತಿ ಚಿಂತಾಜನಕ!

shivamogga
11/05/2023

ಶಿವಮೊಗ್ಗ: ಎರಡು ಬಸ್ ಗಳು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಇಬ್ಬರು ಸಾವನ್ನಪ್ಪಿದ ದಾರುಣ ಘಟನೆ ಶಿವಮೊಗ್ಗ ತಾಲೂಕಿನ ಕುಂಸಿ ಬಳಿಯ ಕುಮಧ್ವತಿ ಸೇತುವೆ‌ ಮೇಲೆ ನಡೆದಿದೆ.

ಹೊಸದುರ್ಗ ನಿವಾಸಿ ತಿಪ್ಪೇಸ್ವಾಮಿ, ಮತ್ತೊಬ್ಬ ಮಹಿಳೆ ಸಾವನ್ನಪ್ಪಿದ್ದಾರೆ. 30ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು, ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅಪಘಾತ ಸ್ಥಳಕ್ಕೆ ಕುಂಸಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಅಪಘಾತ ಸ್ಥಳಕ್ಕೆ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಿಂದ 5 ಆ್ಯಂಬ್ಯುಲೆನ್ಸ್​ಗಳು ಮತ್ತು ಅಗ್ನಿಶಾಮಕ ದಳ ಧಾವಿಸಿದೆ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ನೆರವಾದವು.

ವರದಿಗಳ ಪ್ರಕಾರ ಘಟನೆಯಲ್ಲಿ 6 ಮಂದಿಯ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ. ಬಸ್ ನಲ್ಲಿ ಸುಮಾರು 60ಕ್ಕೂ ಹೆಚ್ಚು ಪ್ರಯಾಣಿಕರಿದ್ದರು. ಘಟನೆಯ ಸುದ್ದಿ ತಿಳಿಯುತ್ತಿದ್ದಂತೆಯೇ ಸಂಸದ ರಾಘವೇಂದ್ರ, ವಿಜಯೇಂದ್ರ ಮೆಗ್ಗಾನ್ ಆಸ್ಪತ್ರೆಗೆ ಭೇಟಿ ನೀಡಿ, ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version