ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆಯಲ್ಲಿ 1,500ಕ್ಕೂ ಹುದ್ದೆಗಳ ನೇರ ನೇಮಕಾತಿಗೆ ಸರ್ಕಾರದಿಂದ ಅನುಮತಿ
Health Department Jobs 2025 — ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವಂತಹ ವಿವಿಧ 1,500ಕ್ಕೂ ಹೆಚ್ಚು ಹುದ್ದೆಗಳನ್ನು KEA, KPSC ಹಾಗೂ HFW ಮುಖಾಂತರ ನೇರನೇಮಕಾತಿ ಮಾಡಿಕೊಳ್ಳಲು ಸರ್ಕಾರವು ಅನುಮತಿ ನೀಡಿದೆ.
ಅದೇ ರೀತಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ವಿವಿಧ ವಿಭಾಗಗಳ 8,994 ಗ್ರೂಪ್ ಬಿ ಮತ್ತು ಗ್ರೂಪ್ ಸಿ ಅರೇ ವೈದ್ಯಕೀಯ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಆಡಳಿತಾತ್ಮಕವಾಗಿ ನೇಮಕಾತಿ ಮಾಡಿಕೊಳ್ಳಲು ಅನುಮತಿ ಕೋರಿ ಸರ್ಕಾರಕ್ಕೆ ಅನುಮತಿ ಪತ್ರ ಸಲ್ಲಿಸಿದೆ.
8,994 ಹುದ್ದೆಗಳ ನೇರ ನೇಮಕಾತಿಗೆ ಭರ್ತಿ ಮಾಡಿಕೊಳ್ಳಲು ಅನುಮತಿ ಸಿಗುವ ತನಕ ಈ ಹುದ್ದೆಗಳನ್ನು ಗುತ್ತಿಗೆ ಹಾಗೂ ಹೊರಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಸಹ ಅನುಮತಿ ಕೋರಿದೆ.
ಸದ್ಯಕ್ಕೆ ಅನುಮತಿ ದೊರೆತ ಹುದ್ದೆಗಳ ವಿವರ :
ಒಟ್ಟು 1,505 ಹುದ್ದೆಗಳನ್ನು ನೇರ ನೇಮಕಾತಿ ಮಾಡಿಕೊಳ್ಳಲು ಸರ್ಕಾರವು ಅನುಮತಿ ನೀಡಿ ಆದೇಶ ಹೊರಡಿಸಿದೆ. ಈ ಹುದ್ದೆಗಳ ವಿಂಗಡಣೆಯು ಈ ಕೆಳಗಿನಂತಿದೆ.
* ಪ್ರಾಥಮಿಕ ಆರೋಗ್ಯ ಸುರಕ್ಷಣಾಧಿಕಾರಿ — 1,205 ಹುದ್ದೆಗಳು
* ಆರೋಗ್ಯ ನಿರೀಕ್ಷಣಾಧಿಕಾರಿ — 300 ಹುದ್ದೆಗಳು
ನೇಮಕಾತಿಗೆ ಅಧಿಕೃತ ಅಧಿಸೂಚನೆ ಯಾವಾಗ ಬಿಡುಗಡೆಯಾಗಲಿದೆ?
ಈ ನೇಮಕಾತಿಗೆ 21 ಡಿಸೆಂಬರ್ 2024ರಂದು ಅನುಮತಿ ಆದೇಶ ಬಂದಿದ್ದು, ನೇಮಕಾತಿ ಪ್ರಕ್ರಿಯೆ ಕುರಿತು ಅಧಿಕೃತ ಅಧಿಸೂಚನೆಯೂ ಇನ್ನೇನು ಕೆಲವೇ ದಿನಗಳಲ್ಲಿ ಬಿಡುಗಡೆಯಾಗುವ ಸಂಪೂರ್ಣ ಸಾಧ್ಯತೆಗಳಿವೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: