ಸಾಮಾಜಿಕ ಜಾಗೃತಿ ಅಭಿಯಾನ ಹಾಗೂ ತಾಯಂದಿರ ಹಾಲಿನ ಬ್ಯಾಂಕ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ - Mahanayaka
11:22 PM Thursday 13 - November 2025

ಸಾಮಾಜಿಕ ಜಾಗೃತಿ ಅಭಿಯಾನ ಹಾಗೂ ತಾಯಂದಿರ ಹಾಲಿನ ಬ್ಯಾಂಕ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

belagavi 2
14/12/2023

ಬೆಳಗಾವಿ:  ‘ನ್ಯುಮೋನಿಯಾ ತೊಲಗಿಸಿ ಆರೋಗ್ಯವಂತ ಬಾಲ್ಯ ಒದಗಿಸಿ’ ಶೀರ್ಷಿಕೆಯಡಿ ಬೆಳಗಾವಿಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಸಾಮಾಜಿಕ ಜಾಗೃತಿ ಅಭಿಯಾನ ಹಾಗೂ ತಾಯಂದಿರ ಹಾಲಿನ ಬ್ಯಾಂಕ್ʼ ಕಾರ್ಯಕ್ರಮಕ್ಕೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹಾಲುಣಿಸುವಿಕೆಯನ್ನು ಉತ್ತೇಜಿಸುವಲ್ಲಿ ಹಾಲಿನ ಬ್ಯಾಂಕುಗಳು ನಿರ್ಣಾಯಕ ಪಾತ್ರವನ್ನು ವಹಿಸುತ್ತವೆ. ಇದು ಮಕ್ಕಳ ಅಕಾಲಿಕ ಮರಣ, ಅನಾರೋಗ್ಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಎಂದು ಹೇಳಿದರು. ಅಲ್ಲದೆ, ರಾಜ್ಯದ ಪ್ರತಿ ಕಂದಾಯ ವಿಭಾಗಕ್ಕೆ ಒಂದು ಎಂಬಂತೆ ನವಜಾತ ಶಿಶುಗಳ ಆ್ಯಂಬುಲೆನ್ಸ್ ಗಳನ್ನು ಪರಿಚಯಿಸಲಾಗುವುದು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರಾದ ರಂದೀಪ್ ಡಿ, ರಾಷ್ಟ್ರೀಯ ಆರೋಗ್ಯ ಅಭಿಯಾನ ನಿರ್ದೇಶಕರಾದ ಡಾ. ನವೀನ್ ಭಟ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

 

ಇತ್ತೀಚಿನ ಸುದ್ದಿ