ಮಗ ಹೃದಯಾಘಾತದಿಂದ ಮೃತಪಟ್ಟ ಸುದ್ದಿ ಕೇಳಿ ತಂದೆಯೂ ಹೃದಯಾಘಾತದಿಂದ ಸಾವು! - Mahanayaka
2:54 PM Thursday 5 - February 2026

ಮಗ ಹೃದಯಾಘಾತದಿಂದ ಮೃತಪಟ್ಟ ಸುದ್ದಿ ಕೇಳಿ ತಂದೆಯೂ ಹೃದಯಾಘಾತದಿಂದ ಸಾವು!

haveri
22/10/2024

ಹಾವೇರಿ: ಮಗ ಹೃದಯಾಘಾತದಿಂದ ಮೃತಪಟ್ಟ ಸುದ್ದಿ ಕೇಳಿ ತಂದೆಯೂ ಹೃದಯಾಘಾತದಿಂದ ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ಹಾವೇರಿ ಜಿಲ್ಲೆಯ ಬಸವೇಶ್ವರ ನಗರದಲ್ಲಿ ನಡೆದಿದೆ.

ಡಾ. ವಿನಯ್ ಗುಂಡಗಾವಿ (38) ಹೃದಯಾಘಾತದಿಂದ ಮೃತಪಟ್ಟಿದ್ದರು.  ಈ ಸುದ್ದಿ ತಿಳಿದ ಇವರ ತಂದೆ ಡಾ.ವೀರಭದ್ರಪ್ಪ ಗುಂಡಗಾವಿ (68) ಆಘಾತ ತಾಳಲಾರದೇ  ತಾನೂ ಹೃದಯಾಘಾತಕ್ಕೊಳಗಾಗಿ ಮೃತಪಟ್ಟಿದ್ದಾರೆ.

ವೃತ್ತಿಯಲ್ಲಿ ವೈದ್ಯರಾಗಿರುವ ತಂದೆ ಮಗ ಇಬ್ಬರೂ ಒಂದೇ ದಿನ ಸಾವಿಗೀಡಾಗಿದ್ದಾರೆ. ಡಾ. ವಿನಯ ಹುಬ್ಬಳ್ಳಿಯಲ್ಲಿ ವೈದ್ಯರಾಗಿದ್ದರು. ತಂದೆ ಡಾ.ವೀರಭದ್ರಪ್ಪ ಹಾವೇರಿಯಲ್ಲಿ ವೈದ್ಯರಾಗಿ ಕೆಲಸ ಮಾಡುತ್ತಿದ್ದರು.

ತಂದೆ ಹಾಗೂ ಮಗ ಬಹಳ ಪ್ರೀತಿಯಿಂದ ಜೊತೆಗಿದ್ದರು ಎನ್ನಲಾಗಿದೆ. ಮಗನ ಸಾವಿನ ಸುದ್ದಿ ಕೇಳುತ್ತಿದ್ದಂತೆಯೇ ಡಾ.ವೀರಭದ್ರಪ್ಪ ಅವರು ಅಸ್ವಸ್ಥರಾಗಿದ್ದು, ಹೃದಯಾಘಾತದಿಂದ ಮೃತಪಟ್ಟಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/BHOOdLNNvmD17cBJslQgwj

ಇತ್ತೀಚಿನ ಸುದ್ದಿ