ಹೃದಯಾಘಾತ: ಸಿನಿಮಾ ಶೂಟಿಂಗ್ ವೇಳೆಯೇ ನಿರ್ದೇಶಕ ಸಾವು - Mahanayaka
3:20 PM Thursday 4 - December 2025

ಹೃದಯಾಘಾತ: ಸಿನಿಮಾ ಶೂಟಿಂಗ್ ವೇಳೆಯೇ ನಿರ್ದೇಶಕ ಸಾವು

sangeeth sagar
04/12/2025

ಶಿವಮೊಗ್ಗ:  ಚಿತ್ರೀಕರಣದ ವೇಳೆ ನಿರ್ದೇಶಕರೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ನಡೆದಿದೆ.

ಸಂಗೀತ್‌ ಸಾಗರ್‌ ಮೃತಪಟ್ಟ ಸಿನಿಮಾ ನಿರ್ದೇಶಕರಾಗಿದ್ದಾರೆ. ಹರಿಹರಪುರದಲ್ಲಿ ಸಿನಿಮಾ ಚಿತ್ರೀಕರಣ ನಡೆಯುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಏಕಾಏಕಿ ಸಂಗೀತ್‌ ಸಾಗರ್‌ ಅವರು ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಕೊಪ್ಪ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಆಸ್ಪತ್ರೆಯಲ್ಲಿ ಅವರು ಸಾವನ್ನಪ್ಪಿದ್ದಾರೆ.

ವರದಿಗಳ ಪ್ರಕಾರ ಪಾತ್ರಧಾರಿ ಎಂಬ ಸಿನಿಮಾದ ಚಿತ್ರೀಕರಣದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಚಿತ್ರೀಕರಣದ ವೇಳೆ ಹಾಸ್ಯ ನಟ ಸಂಜು ಬಸಯ್ಯ ಅವರು ಕೂಡ ಇದ್ದರು ಎಂದು ತಿಳಿದು ಬಂದಿದೆ.

ಸಿನಿಮಾದ ನಿರ್ದೇಶಕ ಹಾಗೂ ಸಂಗೀತ ನಿರ್ದೇಶಕರಾಗಿ ಸಂಗೀತ್ ಸಾಗರ್ ಕೆಲಸ ಮಾಡುತ್ತಿದ್ದರು. ಎಂಟಕ್ಕೂ ಹೆಚ್ಚು ಕನ್ನಡ ಚಿತ್ರಗಳನ್ನು ಇವರು ನಿರ್ದೇಶಿಸಿದ್ದರು. ಇವರು ಸಕಲೇಶಪುರದ ದೊಡ್ಡನಾಗರ ಮೂಲದವರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ