ಹೃದಯ ವಿದ್ರಾವಕ ಘಟನೆ: ಬಟ್ಟೆ ತೊಳೆಯಲು ಹೋಗಿದ್ದ ನಾಲ್ವರು ನೀರುಪಾಲು!

chikkodi
18/05/2024

ಚಿಕ್ಕೋಡಿ: ಬಟ್ಟೆ ತೊಳೆಯಲು ಹೋಗಿದ್ದ ನಾಲ್ವರು ನೀರುಪಾಲಾದ ಘಟನೆ ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆ ಕಾಗಲ್ ತಾಲೂಕಿನ ಬಸ್ತವಾಡೆ ಗ್ರಾಮದಲ್ಲಿ ನಡೆದಿದೆ.

ಮಹಾರಾಷ್ಟ್ರದ ಮುರ್ಗುಡ್ ಗ್ರಾಮದ ಜಿತೇಂದ್ರ ವಿಲಾಸ್ ಲೋಕ್ರೆ (36), ರುಕ್ದಿ ಗ್ರಾಮದ ಸವಿತಾ ಅಮರ್ ಕಾಂಬಳೆ (27), ಬೆಳಗಾವಿಯ ಅಥಣಿಯ ರೇಷ್ಮಾ ದಿಲೀಪ್ (34) ಮತ್ತು ಯಶ್ ದಿಲೀಪ್ (17) ಮೃತಪಟ್ಟವರು ಎಂದು ಗುರುತಿಸಲಾಗಿದೆ.

ಈಗಾಗಲೇ ನಾಲ್ವರ ಮೃತದೇಹ ಪತ್ತೆಯಾಗಿದೆ. ಯಶ್ ದಿಲೀಪ್ ನ ಮೃತದೇಹಕ್ಕಾಗಿ ಶೋಧ ನಡೆಸಲಾಗುತ್ತಿದೆ.

ನಾಲ್ವರು ತೀರ್ಥಯಾತ್ರೆಗೆ ತೆರಳಿದ್ದ ವೇಳೆ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ.  ಶುಕ್ರವಾರ ರಾತ್ರಿ ಆನೂರು ಗ್ರಾಮದಲ್ಲಿನ ಅತಿಥಿ ಗೃಹದಲ್ಲಿ ಇವರು ತಂಗಿದ್ದರು. ಬೆಳಿಗ್ಗೆ ಪಕ್ಕದ ಗ್ರಾಮ ಬಸ್ತೆವಾಡದಲ್ಲಿನ ವೇದಗಂಗಾ ನದಿಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.

ವರದಿಗಳ ಪ್ರಕಾರ, ಮೊದಲು ಇಬ್ಬರು ಕಾಲು ಜಾರಿ ನದಿಗೆ ಬಿದ್ದಿದ್ದಾರೆ. ಇವರನ್ನು ರಕ್ಷಿಸಲು ಮುಂದಾದ ಇತರರು ಕೂಡ ನೀರುಪಾಲಾಗಿದ್ದಾರೆ ಎಂದು ತಿಳಿದು ಬಂದಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಫೇಸ್ ಬುಕ್ ಪೇಜ್ ಫಾಲೋ ಮಾಡಿ: https://www.facebook.com/profile.php?id=61556202767068

ಇತ್ತೀಚಿನ ಸುದ್ದಿ

Exit mobile version