ತವರಿಗೆ ಬಂದ ಎದೆಗಾರ್ತಿ: ಭಾವುಕರಾಗಿ ಕಣ್ಣೀರಿಟ್ಟ ವಿನೇಶ್ ಫೋಗಟ್
ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಭರ್ಜರಿ ಪ್ರದರ್ಶನ ನೀಡಿದ್ದ ಭಾರತೀಯ ಕುಸ್ತಿಪಟು ವಿನೇಶ್ ಫೋಗಟ್ ಶನಿವಾರ ದೆಹಲಿಗೆ ಆಗಮಿಸಿದ್ದಾರೆ. ಅವರಿಗೆ ಕುಸ್ತಿಪಟುಗಳಾದ ಬಜರಂಗ್ ಪುನಿಯಾ, ಸಾಕ್ಷಿ ಮಲಿಕ್ ಸೇರಿದಂತೆ ಅಭಿಮಾನಿಗಳು ಭವ್ಯ ಸ್ವಾಗತ ಕೋರಿದರು. ಆ ಬಳಿಕ ನಡೆದ ಮೆರವಣಿ ವೇಳೆ ವಿನೇಶ್ ಫೋಗಟ್ ಕಣ್ಣೀರು ಹಾಕಿದರು.
ಇದೇ ವೇಳೆ ಮಾತನಾಡಿದ ವಿನೇಶ್ ಫೋಗಟ್, ಪ್ಯಾರಿಸ್ ಒಲಿಂಪಿಕ್ಸ್ 2024 ರ ಸಮಯದಲ್ಲಿ ನೀಡಿದ ಬೆಂಬಲಕ್ಕಾಗಿ ಇಡೀ ದೇಶಕ್ಕೆ ನಾನು ಧನ್ಯವಾದಗಳು. ನಾನು ತುಂಬಾ ಅದೃಷ್ಟಶಾಲಿ ಎಂದು ಭಾವಿಸುತ್ತೇನೆ ಎಂದು ಭಾವುಕರಾದರು. ಇದೀಗ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಆಗಸ್ಟ್ 9 ರಂದು ನಡೆದ ಮಹಿಳೆಯರ 50 ಕೆಜಿ ತೂಕದ ವಿಭಾಗದ ಫೈನಲ್‌ನಿಂದ ಅನರ್ಹಗೊಂಡ ಬಳಿಕ ಬೆಳ್ಳಿ ಪದಕಕ್ಕಾಗಿ ವಿನೇಶ್ ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯಕ್ಕೆ (ಸಿಎಎಸ್) ಗೆ ಮೇಲ್ಮನವಿ ಸಲ್ಲಿಸಿದ್ದರು. ಆದರೆ ಹಲವಾರು ದಿನಗಳ ಕಾಯುವಿಕೆಯ ನಂತರ ಅಂತಿಮವಾಗಿ ಈ ಮನವಿಯನ್ನು ಸಿಎಎಸ್ ವಜಾಗೊಳಿಸಿದೆ. ಇದರೊಂದಿಗೆ ಬೆಳ್ಳಿ ಪದಕದ ನಿರೀಕ್ಷೆಯಲ್ಲಿದ್ದ ವಿನೇಶ್ ಫೋಗಟ್ ಅವರ ಕನಸು ಕೂಡ ಕಮರಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth