10:02 AM Saturday 30 - August 2025

ಮಳೆಗೆ ಭಾರೀ ಅನಾಹುತ: ಗುಡ್ಡ ಕುಸಿದು 7 ಮಂದಿ ಸಾವು

uttara kannada
16/07/2024

ಕಾರವಾರ:  ಭಾರೀ ಮಳೆ ಹಿನ್ನೆಲೆಯಲ್ಲಿಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಅನಾಹುತವೊಂದು ನಡೆದಿದ್ದು, ಗುಡ್ಡ ಕುಸಿದು 7 ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ವರದಿಗಳ ಪ್ರಕಾರ, ಟ್ಯಾಂಕರ್‌ ಚಾಲಕ, ಕ್ಲೀನರ್‌ ಸೇರಿ 7 ಮಂದಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ 7 ಮಂದಿ ಮೃತಪಟ್ಟಿರುವುದನ್ನು ದೃಢಪಡಿಸಿದ್ದಾರೆ ಎಂದು ತಿಳಿದು ಬಂದಿದೆ.

ಗುಡ್ಡ ಕುಸಿತವಾದ ಜಾಗದಲ್ಲಿ ಒಂದು ಚಹಾ ಅಂಗಡಿ ಇತ್ತು. ಇಲ್ಲಿ ಕೆಲವರು ಚಹಾ ಸೇವಿಸುತ್ತಿದ್ದರು ಎನ್ನಲಾಗಿದೆ.

ಘಟನೆ ಸಂಬಂಧ ಪ್ರತಿಕ್ರಿಯೆ ನೀಡಿರುವ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ,  ಗುಡ್ಡ ಕುಸಿದು 7 ಜನ ಮೃತಪಟ್ಟಿರುವುದಾಗಿ ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ. ಮಣ್ಣಿನಡಿ ಸಿಲುಕಿರುವವರ ರಕ್ಷಿಸಲು ಸೂಚನೆ ನೀಡಿದ್ದೇನೆ. ಎನ್‌ ಡಿ​ಆರ್​ಎಫ್ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ ಎಂದು ಸಂಸದರು ತಿಳಿಸಿದರು.

ಮಣ್ಣಿನಡಿ 9 ಜನ ಸಿಲುಕಿದ್ದಾರೆ. ಇದರಲ್ಲಿ ಒಂದೇ ಕಾರಿನಲ್ಲಿ ತೆರಳುತ್ತಿದ್ದ ಒಂದೇ ಕುಟುಂಬದವರು ಇದ್ದಾರೆ ಎನ್ನಲಾಗಿದೆ. ಒಂದೇ ಕುಟುಂಬದ ಲಕ್ಷ್ಮಣ ಬೊಮ್ಮಯ್ಯ ನಾಯ್ಕ (45), ಶಾಂತಿ ಲಕ್ಷ್ಮಣ ನಾಯ್ಕ (35), ಮೃತ ದೇಹ ಪತ್ತೆ, ಆವಾತಿಕಾ ಲಕ್ಷ್ಮಣ ನಾಯ್ಕ (04), ಉಪೇಂದ್ರ ನಾಯ್ಕ(50), ರೋಷನ್ ಲಕ್ಷ್ಮಣ ನಾಯ್ಕ (10) ಜಗ್ನನಾಥ ನಾಯ್ಕ (50), ಸಣ್ಣಿ ಹನುಮಂತ ಗೌಡ (65) ಸೇರಿದಂತೆ 9 ಮಂದಿ ಮಣ್ಣಿನಡಿ ಸಿಲುಕಿದ್ದಾರೆ. 9 ಜನರಲ್ಲಿ 7 ಮಂದಿ ಮೃಪಟ್ಟಿದ್ದಾರೆ. ಮಣ್ಣು ತೆರವು ಕಾರ್ಯಾಚರಣೆ ನಡೆಯುತ್ತಿದೆ ಎಂದು ತಿಳಿದು ಬಂದಿದೆ.

ಗುಡ್ಡ ಕುಸಿತದಿಂದ ಹೆದ್ದಾರಿಯಲ್ಲಿ‌ ವಾಹನ ಸಂಚಾರ ಬಂದ್ ಆಗಿದೆ. ಜಿಲ್ಲಾಡಳಿತದಿಂದ ಹೆದ್ದಾರಿ‌ ಮೇಲೆನ ಮಣ್ಣಿನ ತೆರವು ಕಾರ್ಯಾಚರಣೆ ಪ್ರಾರಂಭವಾಗಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ

Exit mobile version