ಭಾರೀ ಮಳೆ ಹಿನ್ನೆಲೆ: ಜುಲೈ 9ರಂದು ದಕ್ಷಿಣ ಕನ್ನಡ ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ - Mahanayaka
12:50 AM Wednesday 20 - August 2025

ಭಾರೀ ಮಳೆ ಹಿನ್ನೆಲೆ: ಜುಲೈ 9ರಂದು ದಕ್ಷಿಣ ಕನ್ನಡ ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

school
08/07/2024


Provided by

ಮಂಗಳೂರು: ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದ್ದು, ದಿನಾಂಕ 19-07-2024 ರಂದು ರೆಡ್ ಅಲರ್ಟ್ ಘೋಷಣೆಯಾಗಿರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಈ ಕೆಳಗಿನಂತ ತುರ್ತು ಕ್ರಮಗಳನ್ನು ಕೈಗೊಂಡಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ & ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, (12ನೇ ತರಗತಿವರೆಗೆ) ದಿನಾಂಕ: 19-07-2024 ರಂದು ರಜೆಯನ್ನು ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸೂಚನೆಗಳು:

* ವಿದ್ಯಾರ್ಥಿಗಳ ಹಾಜರಾತಿಯನ್ನು ಕಡ್ಡಾಯ ಮಾಡುವಂತಿಲ್ಲ.

*  ದುರ್ಬಲ / ಶಿಥಿಲ ಕಟ್ಟಡಗಳು ಇದ್ದಲ್ಲಿ ಅಂತಹ ಕಟ್ಟಡಗಳನ್ನು ಪಾಠ ಪ್ರವಚನಗಳಿಗೆ ಬಳಸುವಂತಿಲ್ಲ. ಈ ನಿಟ್ಟಿನಲ್ಲಿ ಶಾಲಾ ಕಾಲೇಜುಗಳ ಮುಖ್ಯಸ್ಥರು ಕಟ್ಟಡಗಳ ಸುಸ್ಥಿತಿಯ ಬಗ್ಗೆ ಗಮನಹರಿಸುವುದು.

*  ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ ಸಮುದ್ರ ತೀರಕ್ಕೆ ಸಾರ್ವಜನಿಕರು/ಪ್ರವಾಸಿಗರು ತೆರಳದಂತೆ ಜಾಗೃತ ವಹಿಸುವುದು.

*  ಮೀನುಗಾರರು ಸಮುದ್ರಕ್ಕೆ ಮೀನುಗಾರಿಕೆಗೆ ತೆರಳದಂತೆ ಸೂಚನೆ ನೀಡಲಾಗಿದೆ.

*  ಜಿಲ್ಲೆಯಲ್ಲಿ ವಿಪರೀತ ಮಳೆ ಸುರಿಯುತ್ತಿರುವುದರಿಂದ ಸಾರ್ವಜನಿಕರು ನದಿಗಳ/ತೋಡುಗಳ ಮತ್ತು ವಿದ್ಯುತ್ ಕಂಬ/ತಂತಿ ಸಮೀಪ ಹೋಗದಂತೆ ಎಚ್ಚರಿಕೆ ವಹಿಸುವುದು.

*  ಸಂಭಾವ್ಯ ಹಾನಿಯನ್ನು ತಡೆಗಟ್ಟುವ ಹಿನ್ನಲೆಯಲ್ಲಿ ಸಾರ್ವಜನಿಕರು ಅಪಾಯಕಾರಿ ಸನ್ನಿವೇಶಗಳಿಂದ ದೂರವಿದ್ದು, ಜಿಲ್ಲಾಡಳಿತದ ಸಲಹೆ/ಸೂಚನೆಗಳನ್ನು ಪಾಲಿಸುವುದು.

*  ಪ್ರಾಕೃತಿಕ ವಿಕೋಪದಿಂದ ಯಾವುದೇ ರೀತಿಯ ಘಟನೆಗಳು ಸಂಭವಿಸಿದಲ್ಲಿ ಅಥವಾ ಸಂಭವಿಸಬಹುದಾದ ಸೂಚನೆ ಇದ್ದಲ್ಲಿ ಸಾರ್ವಜನಿಕರು ಕೂಡಲೇ ಸಂಬಂಧಪಟ್ಟ ಪಂಚಾಯತ್/ನಗರ ಸ್ಥಳೀಯ ಸಂಸ್ಥೆಗಳಿಗೆ ಮಾಹಿತಿಯನ್ನು ನೀಡುವುದು.

ಪ್ರಾಕೃತಿಕ ವಿಕೋಪ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ 1077/ 0824–2442590 ಈ ಕೆಳಕಂಡ ದೂರವಾಣಿಯನ್ನು ಸಂಪರ್ಕಿಸುವುದು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ