ಇನ್ನೂ ಎರಡು ದಿನ ಧಾರಾಕಾರ ಮಳೆಯ ಮುನ್ಸೂಚನೆ: ಯಾವ ಜಿಲ್ಲೆಗೆ ಯಾವ ಅಲರ್ಟ್ ತಿಳಿದುಕೊಳ್ಳಿ

ಬೆಂಗಳೂರು: ಮಲೆನಾಡು ಹಾಗೂ ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ವರುಣ(Rain)ನ ಆರ್ಭಟ ಮುಂದುವರೆದಿದ್ದು, ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕೊಡಗು ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಹಾಸನ, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಕಲಬುರಗಿ, ಬೀದರ್ ಜಿಲ್ಲೆಗೆ ಯೆಲ್ಲೋ ಅಲರ್ಟ್ ಇದೆ.
ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ: ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು, ಜಲಾಶಯಗಳ ಒಳಹರಿವು ಹೆಚ್ಚಾಗಲಿದೆ. ಜೋರು ಗಾಳಿ ಬೀಸುತ್ತಿರುವ ಕಾರಣ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಾಮರಾಜನಗರ, ದಾವಣಗೆರೆ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಹಾಗೂ ಚಿತ್ರದುರ್ಗದಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಶೃಂಗೇರಿ, ಕೊಪ್ಪ, ಸಿದ್ದಾಫುರ, ಕದ್ರಾ, ಬನವಾಸಿ, ವಿರಾಜಪೇಟೆ, ಕೊಟ್ಟಿಗೆಹಾರ, ಬೆಳ್ತಂಗಡಿ, ಯಲ್ಲಾಪುರ, ಕ್ಯಾಸಲ್ರಾಕ್, ಖಾನಾಪುರ, ಸೋಮವಾರಪೇಟೆ, ಪೊನ್ನಂಪೇಟೆಯಲ್ಲಿ ಗುರುವಾರ ಭಾರಿ ಮಳೆಯಾಗಿದೆ. ಕಾರ್ಕಳ, ಬಂಟ್ವಾಳ, ಸುಳ್ಯ, ಗೇರುಸೊಪ್ಪ, ಹೊನ್ನಾವರ, ಮಾಣಿ, ಶಕ್ತಿನಗರ, ಕುಂದಾಪುರ, ಮೂಡುಬಿದಿರೆ, ಅಂಕೋಲಾ, ಬೆಳಗಾವಿ, ಮಂಕಿ, ಹಳಿಯಾಳ, ಮುಂಡಗೋಡು, ಪುತ್ತೂರು, ಗೋಕರ್ಣ, ಶಿರಾಲಿ, ಮಂಗಳೂರು, ಕೋಟಾ, ಬೀದರ್, ಕಿತ್ತೂರು, ಹಾವೇರಿ, ಚಿಂಚೋಳಿ, ಧಾರವಾಡ, ಹುಬ್ಬಳ್ಳಿ, ಹಿರೆಕೆರೂರು, ಕಲಬುರಗಿ, ಗುಬ್ಬಿ, ಜಗಳೂರು ಹಾಗೂ ಭದ್ರಾವತಿಯಲ್ಲಿ ಸಾಧಾರಣ ಮಳೆ ಸುರಿದಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: