ಭಾರೀ ಮಳೆ ಮುನ್ಸೂಚನೆ: ಜು.8ರಂದು ದ.ಕ. ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ
ಮಂಗಳೂರು: ಕರಾವಳಿ ಜಿಲ್ಲೆ ದಕ್ಷಿಣ ಕನ್ನಡದಲ್ಲಿ ಮುಂಗಾರು ಮಳೆಯ ಅಬ್ಬರ ಜೋರಾಗಿದ್ದು, ಹವಾಮಾನ ಇಲಾಖೆ ಮುನ್ಸೂಚನೆ ಬೆನ್ನಲ್ಲೇ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಬುಧವಾರ (ಜು.8) ರಂದು ಜಿಲ್ಲೆಯಾದ್ಯಂತ ಎಲ್ಲಾ ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಹೆಚ್.ವಿ. ದರ್ಶನ್ ಆದೇಶ ಹೊರಡಿಸಿದ್ದಾರೆ.
ಜಿಲ್ಲಾಧಿಕಾರಿಗಳ ಆದೇಶದಂತೆ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು, ಮತ್ತು ಪದವಿ ಪೂರ್ವ (PU) ಕಾಲೇಜುಗಳಿಗೆ ರಜೆ ಅನ್ವಯವಾಗಲಿದೆ.
ಆದೇಶ ಉಲ್ಲಂಘಿಸಿ ತರಗತಿಗಳನ್ನು ನಡೆಸುವ ಶಿಕ್ಷಣ ಸಂಸ್ಥೆಗಳ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005ರ ಅಡಿಯಲ್ಲಿ ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಡಳಿತ ಎಚ್ಚರಿಸಿದೆ.
ಮಳೆಯ ಹಿನ್ನೆಲೆಯಲ್ಲಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ನದಿ, ಹಳ್ಳ, ಕೊಳ್ಳ ಹಾಗೂ ಸಮುದ್ರ ತೀರಕ್ಕೆ ತೆರಳದಂತೆ ಸೂಚಿಸಲಾಗಿದೆ. ಪೋಷಕರು ತಮ್ಮ ಮಕ್ಕಳ ಬಗ್ಗೆ ಹೆಚ್ಚುವರಿ ಜಾಗ್ರತೆ ವಹಿಸುವಂತೆ ಕೋರಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD


























