ಭಾರೀ ಮಳೆ: ಜುಲೈ 20ರಂದು ದಕ್ಷಿಣ ಕನ್ನಡ ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

rain
19/07/2024

ದಕ್ಷಿಣ ಕನ್ನಡ: ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜುಲೈ 20 (ಶನಿವಾರ ) ರಂದು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಪಿಯುಸಿವರೆಗಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಜಿಲ್ಲೆಯಾದ್ಯಂತ ಭಾರೀ  ಗಾಳಿ ಮಳೆ ಎಡೆ ಬಿಡದೇ ಸುರಿಯುತ್ತಿದ್ದು, ಹೀಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಅಂಗನವಾಡಿ, ಪ್ರಾಥಮಿಕ, ಪ್ರೌಢ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ.

ಜಿಲ್ಲೆಯಲ್ಲಿ ತಗ್ಗು ಪ್ರದೇಶಗಳು ಜಲಾವೃತವಾಗಿದ್ದು ನದಿ ಪಾತ್ರದ ಜನರು ಆತಂಕದಲ್ಲೇ ಕಾಲ ಕಳೆಯುವ ಸ್ಥಿತಿ ನಿರ್ಮಾಣವಾಗಿದೆ. ಜನರು ಎಚ್ಚರಿಕೆ ವಹಿಸಲು ಜಿಲ್ಲಾಡಳಿತ ಸೂಚನೆ ನೀಡಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ

Exit mobile version