ಭಾರೀ ಮಳೆ: ಜು.17ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ, ಪಿ.ಯು. ಕಾಲೇಜುಗಳಿಗೆ ರಜೆ - Mahanayaka

ಭಾರೀ ಮಳೆ: ಜು.17ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ, ಪಿ.ಯು. ಕಾಲೇಜುಗಳಿಗೆ ರಜೆ

haevy rain
16/07/2025


Provided by

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಬಿರುಸಿನ ಮಳೆಯಾಗುತ್ತಿದ್ದು, ಮುಂಜಾಗೃತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜು, ಸರಕಾರಿ, ಅನುದಾನಿತ ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಜು.17 ರಂದು ಜಿಲ್ಲಾಡಳಿತ ಘೋಷಿಸಿದೆ.

ಮುನ್ನೆಚ್ಚರಿಕೆ ವಹಿಸಲು ಸೂಚನೆ:

ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿತೀರ ಸಮುದ್ರತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆ ವಹಿಸಬೇಕು. ಮೀನುಗಾರರು ಸಮುದ್ರಕ್ಕೆ ಇಳಿಯಬಾರದು, ಜಿಲ್ಲಾ ಮಟ್ಟದ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು, ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರಬೇಕು ಹಾಗೂ ವಿಪತ್ತು ನಿರ್ವಹಣೆಯನ್ನು ಕಡ್ಡಾಯವಾಗಿ ನಿರ್ವಹಿಸಬೇಕು. ಜಿಲ್ಲಾಡಳಿತದಿಂದ ವಿವಿಧ ಪ್ರದೇಶಗಳಿಗೆ ನೇಮಿಸಲಾಗಿರುವ ನೋಡಲ್ ಅಧಿಕಾರಿಗಳು ಸದಾ ಜಾಗೃತರಾಗಿದ್ದು, ಸಾರ್ವಜನಿಕ ದೂರುಗಳಿಗೆ ತಕ್ಷ್ಮಣ ಸ್ಪಂದಿಸಬೇಕು ಮತ್ತು ಜಿಲ್ಲಾಧಿಕಾರಿ ಕಚೇರಿಯ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರಬೇಕು. ಪ್ರವಾಸಿಗರು, ಸಾರ್ವಜನಿಕರು ನದಿತೀರಕ್ಕೆ, ಸಮುದ್ರ ತೀರಕ್ಕೆ ತೆರಳಬಾರದು, ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಪ್ರತೀ ತಾಲೂಕುಗಳಲ್ಲಿ ಕಾಳಜಿ ಕೇಂದ್ರವನ್ನು ತೆರೆದು ಸನ್ನದ್ದ ಸ್ಥಿತಿಯಲ್ಲಿರಿಸಿಕೊಳ್ಳಬೇಕು ಎಂದು ದ.ಕ. ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಅವರು ತಿಳಿಸಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ