ಚಿಕ್ಕಮಗಳೂರಿನಲ್ಲಿ ಮಳೆ ಅಬ್ಬರ: ರಸ್ತೆಗೆ ಅಡ್ಡವಾಗಿ ಬಿದ್ದ ಬೃಹತ್ ಗಾತ್ರದ ಮರ

12/04/2024
ಚಿಕ್ಕಮಗಳೂರು: ಕಾಫಿನಾಡ ಮಲೆನಾಡು ಭಾಗದಲ್ಲಿ ಅಬ್ಬರದ ಮಳೆಯಾಗುತ್ತಿದ್ದು, ಭಾರೀ ಗಾಳಿ—ಮಳೆಗೆ ಬೃಹತ್ ಗಾತ್ರದ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದಿದೆ.
ಚಿಕ್ಕಮಗಳೂರು ತಾಲೂಕಿನ ಶಿರಗೋಳ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಖಾಂಡ್ಯ, ಸಂಗಮೇಶ್ವರ ಪೇಟೆ, ಜೇನುಗದ್ದೆ, ಶಿರಗೋಳ ಗ್ರಾಮದಲ್ಲಿ ಭಾರೀ ಮಳೆಯಾಗಿದೆ.
ಶಿರಗೋಳ ಗ್ರಾಮದ ರಸ್ತೆಗೆ ಬೃಹತ್ ಗಾತ್ರದ ಅರಳಿ ಮರ ಉರುಳಿ ಬಿದ್ದಿದೆ. ಭಾರೀ ಗಾಳಿಗೆ ಬೃಹತ್ ಗಾತ್ರದ ಅರಳಿ ಮರ ನೆಲ ಸಮವಾಗಿದೆ.
ಸಂಗಮೇಶ್ವರ ಪೇಟೆಯ ಶಾಲೆಯ ಕಾಂಪೌಂಡ್ ಮೇಲೆ ಮರ ಬಿದ್ದಿದೆ. ಗಾಳಿ–ಮಳೆಯಿಂದಾಗಿ ಸುತ್ತಮುತ್ತಲ ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕ ಕಡಿತವಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth