ಮಲೆನಾಡಲ್ಲಿ ಭಾರೀ ಮಳೆ: ಟೀ ಎಸ್ಟೇಟಿಗೆ ನುಗ್ಗಿದ ನೀರು!

30/08/2025
ಚಿಕ್ಕಮಗಳೂರು: ಮಲೆನಾಡಲ್ಲಿ ಭಾರೀ ಮಳೆ ಮುಂದುವರಿದಿದ್ದು, ಕಳಸ ತಾಲೂಕಿನ ಸುತ್ತಮುತ್ತಾ ಧಾರಾಕಾರ ಮಳೆಯಾಗಿದೆ.
ಭಾರೀ ಮಳೆಯಿಂದ ಟೀ ಎಸ್ಟೇಟಿಗೆ ನೀರು ನುಗ್ಗಿದೆ. ಕಳಸ ತಾಲೂಕಿನ ಕೆಳಗೂರು ಗ್ರಾಮದಲ್ಲಿ ಘಟನೆ ನಡೆದಿದೆ. ಟೀ ಎಸ್ಟೇಟ್ ನಲ್ಲಿ ಕೆಲಸ ಮಾಡ್ತಿದ್ದ ಕಾರ್ಮಿಕರು ಭಾರೀ ಪ್ರಮಾಣದ ನೀರು ಕಂಡು ಕಂಗಾಲಾಗಿದ್ದಾರೆ.
ಬೆಳಗ್ಗೆಯಿಂದ ಒಂದೇ ಸಮನೆ ಮಳೆ ಸುರಿಯುತ್ತಿದ್ದು, ನಿರಂತರ ಮಳೆಯಿಂದ ಮಲೆನಾಡಿಗರ ಜನಜೀವನ ಹೈರಾಣಾಗಿದೆ. ಎಡೆಬಿಡದೆ ಸುರಿಯುತ್ತಿರೋ ಮಳೆಯಿಂದ ಕಾಫಿ ಬೆಳೆಗಾರರು ಕಂಗಾಲಾಗಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD