ಭಾರೀ ಮಳೆ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ಸ್ನಾನಘಟ್ಟ ಮುಳುಗಡೆ - Mahanayaka
2:51 AM Wednesday 27 - August 2025

ಭಾರೀ ಮಳೆ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ಸ್ನಾನಘಟ್ಟ ಮುಳುಗಡೆ

kumaradhara
15/07/2024


Provided by

ಕಡಬ: ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ಸ್ನಾನಘಟ್ಟ ಮುಳುಗಡೆಯಾಗಿದೆ.

ಪಶ್ಚಿಮ ಘಟ್ಟ ಪ್ರದೇಶ, ಕುಮಾರಪರ್ವತ ಸೇರಿದಂತೆ ಸುಬ್ರಹ್ಮಣ್ಯ ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದೆ.  ಈ ಹಿನ್ನೆಲೆ ಕುಮಾರಧಾರ ಸ್ನಾನಘಟ್ಟ ಮುಳುಗಡೆಯಾಗಿದೆ.

ಕುಮಾರಧಾರ ಕಿಂಡಿ ಅಣೆಕಟ್ಟು ಸಂಪೂರ್ಣ ಮುಳುಗಡೆಯಾಗಿದ್ದು, ನಿರಂತರ ಸುರಿಯುತ್ತಿರುವ ಮಳೆಗೆ ಕುಮಾರಧಾರ ತುಂಬಿ ಹರಿಯುತ್ತಿದೆ. ಕುಮಾರಧಾರ ನದಿಗೆ ಇಳಿಯದಂತೆ ಭಕ್ತರಿಗೆ ಸೂಚನೆ ನೀಡಲಾಗಿದೆ.

ಇನ್ನೊಂದೆಡೆ ಕುಮಾರಧಾರ ಉಪನದಿ ದರ್ಪಣ ತೀರ್ಥ ತುಂಬಿ ಹರಿಯುತ್ತಿದೆ. ಕುಮಾರಧಾರ ನದಿ ತೀರದಲ್ಲಿ ದೇವಳದ ಭದ್ರತಾ ಸಿಬ್ಬಂದಿ, ಹೋಮ್ ಗಾರ್ಡ್‌ಗಳನ್ನು ನಿಯೋಜಿಸಲಾಗಿದ್ದು, ಮುಂಜಾಗೃತಾ ಕ್ರಮ ವಹಿಸಲಾಗಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ