8:15 AM Tuesday 18 - November 2025

ಇಂದು ಬೆಳಗಾವಿ, ಕಲಬುರಗಿಯಲ್ಲಿ ಭಾರೀ ಮಳೆ: ಕರ್ನಾಟಕದ ವಿವಿಧ ಪ್ರದೇಶಗಳಲ್ಲಿ ಭಾರೀ ಮಳೆಯಾಗಲಿದೆ

rain
22/07/2023

ಉತ್ತರ ಕರ್ನಾಟಕ ಹಾಗೂ ಕರಾವಳಿ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು,  ಕಲಬುರಗಿ, ಬೀದರ್ ಜಿಲ್ಲೆಯಲ್ಲಿ ಮಳೆಯಿಂದಾಗಿ ಕೆಲ ಪ್ರದೇಶಗಳ ಜಲಾವೃತಗೊಂಡಿವೆ.

ರಾಜ್ಯದಲ್ಲಿ ಮುಂದಿನ ಐದು ದಿನಗಳ ಕಾಲ ಸಾಧಾರಣ ಮಳೆಯಾಗಲಿದೆ ಎಂದ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡು ಮತ್ತು ದಕ್ಷಿಣ  ಒಳನಾಡಿನ ಕೆಲ ಪ್ರದೇಶಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ತಿಳಿಸಿದೆ.

ಉತ್ತರ ಒಳನಾಡು ಪ್ರದೇಶಗಳಾದ ಬೆಳಗಾವಿ, ಬೀದರ್, ಧಾರವಾಡ, ಕಲಬುರಗಿ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗಲಿದೆ. ಬಾಗಲಕೋಟೆ, ಗದಗ, ಹಾವೇರಿ, ಕೊಪ್ಪಳ, ವಿಜಯಪುರ ಜಿಲ್ಲೆಗಳಲ್ಲಿ ಸಾಧಾರಣೆ ಮಳೆಯಾಗಲಿದೆ.

ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಬಿರುಗಾಳಿ ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಬಿರುಗಾಳಿ ಸಹಿತ ಭಾರೀ ಮಳೆಯಾಗಲಿದೆ. ಗಂಟೆಗೆ 40ರಿಂದ 45 ಕಿ.ಮೀ. ವೇಗದಲ್ಲಿ ಗಾಳಿ ಬೀಸುವುದರಿಂದ ಮೀನುಗಾರರು ಸಮುದ್ರಕ್ಕಿಳಿಯದಂತೆ ಸೂಚನೆ ನೀಡಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 7483551849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version