ಮುಂಗಾರು ಮಳೆ ಪ್ರವೇಶ: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ: ಮನೆ ಮೇಲೆ ಬಿದ್ದ ಬೃಹತ್ ಮರ

house
10/06/2023

ಕೇರಳ ಕರಾವಳಿಗೆ ಮುಂಗಾರು ಪ್ರವೇಶಿಸಿದ ಕಾರಣ ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕಡೆ ಇಂದು ಗುಡುಗು ಸಹಿತ ಮಳೆ ಸುರಿಯಿತು. ಮಂಗಳೂರು ನಗರ, ಬಂಟ್ಬಾಳ, ಉಳ್ಳಾಲ, ಬೆಳ್ತಂಗಡಿ, ಸುಳ್ಯ, ಪುತ್ತೂರು, ಕಡಬ, ಸುಬ್ರಹ್ಮಣ್ಯ ಭಾಗದ ಹಲವಡೆ ಭಾರೀ ಮಳೆ ಸುರಿಯಿತು.

ಇನ್ನು ಮಂಗಳೂರಿನ ಕಾವೂರಿನಲ್ಲಿ ಬಿ.ಜಿ.ಎಸ್ ಶಾಲೆಯ ಹಿಂಭಾಗ ಇಂದು ಬೃಹತ್ ಗಾತ್ರದ ಮರವೊಂದು ಮನೆಯ ಮೇಲೆ ಉರುಳಿ ಬಿದ್ದು, ಮೂರು ಮಂದಿಗೆ ಗಾಯಗಳಾಗಿವೆ.

ಭಾರಿ ಮಳೆಯಿಂದಾಗಿ ಬೃಹತ್ ಗಾತ್ರದ ಮರವೊಂದು ಮನೆಯ ಮೇಲೆ ಉರುಳಿ ಬಿದ್ದ ಪರಿಣಾಮ ಮನೆಯ ಛಾವಣಿ ಸಂಪೂರ್ಣ ನಾಶವಾಗಿ ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version