ರಾಜ್ಯದಲ್ಲಿ 6 ದಿನಗಳ ಕಾಲ ಮಳೆ ಅಬ್ಬರ: ಈ ಜಿಲ್ಲೆಗಳಲ್ಲಿ ಮುನ್ನೆಚ್ಚರಿಕೆ

ಬೆಂಗಳೂರು: ಮುಂದಿನ ಆರು ದಿನಗಳ ಕಾಲ ಕರ್ನಾಟಕದಲ್ಲಿ ಮಳೆಯಾಗಲಿದ್ದು, ರಾಜ್ಯದ ಕೆಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಆರೆಂಜ್ ಅಲರ್ಟ್ ಅನ್ನು ಕರಾವಳಿ ಭಾಗದ ಜಿಲ್ಲೆಗಳಿಗೆ ಘೋಷಿಸಲಾಗಿದೆ. ಬೆಂಗಳೂರು ಸೇರಿದಂತೆ ಇತರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಅಲ್ಲಲ್ಲಿ ಹಗುರಾದ ಮಳೆಯಾಗುವ ಸಾಧ್ಯತೆ ಇದೆ. ಗಂಟೆಗೆ 40–50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ನಿರೀಕ್ಷೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಸುಮಾರು 29°C ಮತ್ತು 21°C ಇರಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.
ಜೂನ್ 30ರಿಂದ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಹೆಚ್ಚಿನ ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಬಾಗಲಕೋಟೆ, ಧಾರವಾಡ, ಕೊಪ್ಪಳ, ಕಲಬುರಗಿ, ಗದಗ, ಹಾವೇರಿ, ವಿಜಯಪುರ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ.
ಇನ್ನೂ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಮಂಡ್ಯ, ಮೈಸೂರು, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಜುಲೈ 5ರವರೆಗೆ ಮಳೆಯಾಗಲಿದೆ ಎನ್ನಲಾಗಿದೆ.
ಜುಲೈ 2 ರಂದು ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ, ಬೆಳಗಾವಿ, ಬೀದರ್, ಬಾಗಲಕೋಟೆ, ಧಾರವಾಡ, ಕೊಪ್ಪಳ, ಕಲಬುರಗಿ, ಗದಗ, ಹಾವೇರಿ, ವಿಜಯಪುರ, ರಾಯಚೂರು ಮತ್ತು ಯಾದಗಿರಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಮತ್ತು ಹಾಸನ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, ದಾವಣಗೆರೆ, ರಾಮನಗರ, ಬಳ್ಳಾರಿ, ಚಿತ್ರದುರ್ಗ, ಮಂಡ್ಯ, ಮೈಸೂರು, ಕೋಲಾರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಕೆಲವು ಹಗುರ ಮಳೆಯಾಗುವ ಸಾಧ್ಯತೆಯಿದೆ.
ರಾಜ್ಯದಲ್ಲಿ ಭಾನುವಾರದಿಂದ ನಾಲ್ಕು ದಿನ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂ.29ರಿಂದ ಜು.2ರವರೆಗೆ ಕರಾವಳಿಯಲ್ಲಿಸಾಧಾರಣ ಮತ್ತು ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿಅತಿ ಸಾಧಾರಣ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಲ್ಲಿಗಾಳಿಯ ವೇಗ ಪ್ರತಿ ಗಂಟೆಗೆ 30–40 ಕಿ.ಮೀ ಇರಲಿದ್ದು, ಒಳ-ನಾಡಿನ ಜಿಲ್ಲೆಗಳಲ್ಲಿ40–50 ಕಿ.ಮೀ ಇರಲಿದೆ. ರಾಜ್ಯದ ಕರಾವಳಿಯ ಬಹುತೇಕ ಕಡೆ ಹಾಗೂ ಒಳನಾಡಿನ ಕೆಲವೆಡೆ ಶನಿವಾರ ಮಳೆಯಾಗಿದೆ. ಉತ್ತರ ಕನ್ನಡ ಜಿಲ್ಲೆಯ ಕದ್ರಾ 9, ಕ್ಯಾಸಲ್ ರಾಕ್ 8, ಶಿವಮೊಗ್ಗ ಜಿಲ್ಲೆಯ ಆಗುಂಬೆ 5, ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ, ಬೆಳ್ತಂಗಡಿ ತಲಾ 4 ಸೆಂ.ಮೀ, ಉಡುಪಿ ಜಿಲ್ಲೆಯ ಸಿದ್ದಾಪುರ, ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ, ಗೇರುಸೊಪ್ಪ, ಹೊನ್ನಾವರ, ಜೋಯಿಡಾ, ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಲಾ 3 ಸೆಂ.ಮೀ ಮಳೆ ಬಿದ್ದಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD