ಮಳೆಯ ಅಬ್ಬರ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸೋಮವಾರ ಶಾಲೆಗಳಿಗೆ ರಜೆ - Mahanayaka

ಮಳೆಯ ಅಬ್ಬರ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸೋಮವಾರ ಶಾಲೆಗಳಿಗೆ ರಜೆ

09/07/2023


Provided by

ದೇಶದ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಿರಂತರ ಮಳೆ ಸುರಿಯುತ್ತಿದೆ. ಹೀಗಾಗಿ ನಾಳೆಯೂ (ಸೋಮವಾರ) ಮಳೆ ಮುಂದುವರಿಯುವ ಸಾಧ್ಯತೆ ಇದೆ. ಹೀಗಾಗಿ ನಾಳೆ ದೆಹಲಿಯಲ್ಲಿನ ಎಲ್ಲಾ ಶಾಲೆಗಳಿಗೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ರಜೆ ಘೋಷಿಸಿದ್ದಾರೆ.
ಪ್ರಾಥಮಿಕ ಹವಾಮಾನ ಕೇಂದ್ರವಾದ ಸಫ್ದರ್‌ಜಂಗ್ ವೀಕ್ಷಣಾಲಯವು ಭಾನುವಾರ ಬೆಳಿಗ್ಗೆ ಕಳೆದ 24 ಗಂಟೆಗಳಲ್ಲಿ ದೆಹಲಿಯಲ್ಲಿ 153 ಮಿಮೀ ದಾಖಲೆಯ ಮಳೆಯಾಗಿತ್ತು. 1982 ರ ಬಳಿಕ ಜುಲೈನಲ್ಲಿ ಒಂದೇ ದಿನದಲ್ಲಿ ಅತಿ ಹೆಚ್ಚು ಮಳೆಯಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಉತ್ತರಾಖಂಡ್, ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರ, ಹರಿಯಾಣ, ಉತ್ತರ ಪ್ರದೇಶ, ಮಧ್ಯಪ್ರದೇಶ, ಕರಾವಳಿ ಕರ್ನಾಟಕ ಮತ್ತು ಗುಜರಾತ್​ನ ಹಲವು ಪ್ರದೇಶಗಳಲ್ಲಿಯೂ ಸಾಕಷ್ಟು ಮಳೆಯಾಗಿದೆ. ಹಾಗಾಗಿ ಎಲ್ಲಾ ಸರ್ಕಾರಿ ಅಧಿಕಾರಿಗಳ ಭಾನುವಾರದ ರಜೆಯನ್ನು ರದ್ದುಗೊಳಿಸಿ ಕೆಲಸಕ್ಕೆ ಹಾಜರಾಗುವಂತೆ ಸಿಎಂ ಅರವಿಂದ್ ಕೇಜ್ರಿವಾಲ್​ ಸೂಚಿಸಿದ್ದರು.
ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆ ಮತ್ತು ಹವಾಮಾನ ಇಲಾಖೆಯ ಎಚ್ಚರಿಕೆಗಳನ್ನು ಗಮನದಲ್ಲಿಟ್ಟುಕೊಂಡು, ಸೋಮವಾರ ಎಲ್ಲಾ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಈ ಕುರಿತಾಗಿ ಸಿಎಂ ಕೇಜ್ರಿವಾಲ್ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.
ಇಂದು 8:30 ಕ್ಕೆ ಕೊನೆಗೊಂಡ 24-ಗಂಟೆಗಳ ಅವಧಿಯಲ್ಲಿ 153 ಮಿಮೀ ಮಳೆಯನ್ನು ದಾಖಲಿಸಿದೆ, ಜುಲೈ 25, 1982 ರಂದು 24-ಗಂಟೆಗಳ ಮಳೆಯಾದ 169.9 ಮಿಮೀ ಮಳೆಯಾಗಿದೆ.

 

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ