ಭಾರೀ ಮಳೆ: ದಕ್ಷಿಣ ಕನ್ನಡ ಜಿಲ್ಲೆಯ ಶಾಲೆಗಳಿಗೆ ಆ.30ರಂದು ರಜೆ ಘೋಷಣೆ

ದಕ್ಷಿಣ ಕನ್ನಡ(ಮಂಗಳೂರು): ದಕ್ಷಿಣ ಕನ್ನಡ ಜಿಲ್ಲಾದ್ಯಂತ ವ್ಯಾಪಕವಾಗಿ ಮಳೆಯಾಗ್ತಿದೆ. ಇದೇ ಹವಾಮಾನ ಮುಂದುವರಿಯುವ ಸೂಚನೆ ಕೂಡ ಕಂಡು ಬಂದಿದ್ದು, ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಮತ್ತು ಪ್ರೌಢ ಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ದಿನಾಂಕ 30—08—2025ರಂದು ರಜೆ ಘೋಷಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದಲೂ ನಿರಂತರವಾಗಿ ಮಳೆಯಾಗುತ್ತಿದೆ. ಹೀಗಾಗಿ ಜಿಲ್ಲಾಡಳಿತ ಅಗತ್ಯ ಕ್ರಮಗಳನ್ನು ಕೈಗೊಂಡಿದೆ. ಪ್ರಾಕೃತಿಕ ವಿಕೋಪಗಳಿಗೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆಗಳಿಗೆ ತುರ್ತು ಸೇವೆ ಟೋಲ್ ಫ್ರೀ ಸಂಖ್ಯೆ ಕಂಟ್ರೋಲ್ ರೂಂ 1077/08242442590 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD