ಭಾರೀ ಮಳೆ: ಮಂಗಳೂರು, ಬಂಟ್ವಾಳ, ಉಳ್ಳಾಲ ತಾಲೂಕಿನ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ವಿವಿಧ ತಾಲೂಕುಗಳ ಶಾಲೆ, ಪಿಯು ಕಾಲೇಜುಗಳಿಗೆ ತಹಶೀಲ್ದಾರರು ರಜೆ ಘೋಷಿಸಲಾಗಿದೆ.
ಮಂಗಳೂರು ತಾಲೂಕು, ಬಂಟ್ವಾಳ ತಾಲೂಕು, ಉಳ್ಳಾಲ ತಾಲೂಕಿನಾದ್ಯಂತ ವ್ಯಾಪಕವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ ಜು.19ರಂದು ರಜೆ ಘೋಷಿಸಲಾಗಿದೆ.
ಮಂಗಳೂರು ನಗರದಲ್ಲಿ ಕಳೆದ ಹಲವು ದಿನಗಳಿಂದಲೂ ನಿರಂತರವಾಗಿ ಮಳೆ ಸುರಿಯುತ್ತಿವೆ. ನಗರದ ನಂತೂರು ಸರ್ಕಲ್ ನಲ್ಲಿ ಮಳೆಯಿಂದಾಗಿ ನಿರಂತರ ಟ್ರಾಫಿಕ್ ಜಾಮ್ ಉಂಟಾಗುತ್ತಿದೆ.
ಇನ್ನೂ ನಂತೂರು ಸರ್ಕಲ್ ರಸ್ತೆಗಳಲ್ಲಿ ಅಲ್ಲಲ್ಲಿ ಮಳೆಯಿಂದಾಗಿ ದೊಡ್ಡ ಗುಂಡಿಗಳು ಸೃಷ್ಟಿಯಾಗಿದ್ದು, ಗುಂಡಿಗಳಲ್ಲಿ ನೀರು ತುಂಬಿ ದ್ವಿಚಕ್ರ ವಾಹನ ಸವಾರರಿಗೆ ಅಪಾಯಕಾರಿಯಾಗಿ ಪರಿಣಮಿಸಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD