4:08 AM Wednesday 22 - October 2025

ಭಾರೀ ಮಳೆ: ಮೇ 31ರಂದು ದಕ್ಷಿಣ ಕನ್ನಡ ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ರಜೆ

rain
30/05/2025

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ ಅತೀ ಹೆಚ್ಚಿನ ಮಳೆ ದಾಖಲಾಗಿರುತ್ತದೆ. ಇದೇ ಹವಾಮಾನ ಪರಿಸ್ಥಿತಿಯು ಮುಂದುವರಿಯುವ ಸೂಚನೆ ಇರುವ ಹಿನ್ನೆಲೆ ಮೇ 31ರಂದು ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ & ಪ್ರೌಢಶಾಲೆ, (ಸಿಬಿಎಸ್ ಇ, ಐಸಿಎಸ್ ಇ ಸೇರಿದಂತೆ), ಪದವಿ ಪೂರ್ವ ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ದಿನಾಂಕ: 31.05.2025 ರಂದು ರಜೆಯನ್ನು ಘೋಷಿಸಲಾಗಿದೆ.

ಎಚ್ಚರಿಕೆ ಕ್ರಮಗಳು:

> ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ ಸಮುದ್ರ ತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗೃತ ವಹಿಸುವುದು.

> ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ.  ಪ್ರವಾಸಿಗರು / ಸಾರ್ವಜನಿಕರು ನದಿತೀರಕ್ಕೆ, ಸಮುದ್ರತೀರಕ್ಕೆ, ಚಾರಣಕ್ಕೆ ತೆರಳದಂತೆ ಸೂಚಿಸಲಾಗಿದೆ.

> ಪ್ರಾಕೃತಿಕ ವಿಕೋಪ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ ಈ ಕೆಳಕಂಡ ದೂರವಾಣಿಯನ್ನು ಸಂಪರ್ಕಿಸುವುದು.

24X7 ತುರ್ತು ಸೇವೆಗೆ ಟೋಲ್ ಫ್ರೀ ಸಂಖ್ಯೆ.  ಕಂಟ್ರೋಲ್ ರೂಮ್ ನಂ: 1077 ಅಥವಾ 0824 –2442590 ಸಂಪರ್ಕಿಸಬಹುದು ಎಂದು ದ.ಕ. ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

Exit mobile version