7:55 PM Wednesday 22 - October 2025

ಬೆಂಗಳೂರಿನಲ್ಲಿ ಭಾರೀ ಮಳೆ: ಕಾರಿನೊಳಗೆ ಸಿಲುಕಿ ಯುವತಿ ಸಾವು

bangalore rain
21/05/2023

ಬೆಂಗಳೂರು: ಆಂಧ್ರಪ್ರದೇಶದಿಂದ ಬೆಂಗಳೂರಿಗೆ  ಪ್ರವಾಸಕ್ಕೆ ಬಂದಿದ್ದ ಕುಟುಂಬವೊಂದರ ಮಹಿಳೆ ಭಾರೀ ಮಳೆಯಲ್ಲಿ ಸಿಲುಕಿ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.

ಆಂಧ್ರದಿಂದ ಬಂದು ನಗರದ ಪ್ಯಾಲೆಸ್, ಲಾಲ್‌ಬಾಗ್, ಕಬ್ಬನ್ ಪಾರ್ಕ್, ವಿಧಾನಸೌಧ ಸೇರಿದಂತೆ ಹಲವು ಕಡೆ ಪ್ರವಾಸ ಮುಗಿಸಿ ಬಂದಿದ್ದರು. ಕುಟುಂಬದವರು ಕಾರಿನಲ್ಲಿ ತೆರಳುತ್ತಿದ್ದರು. ಭಾರೀ ಮಳೆಯಿಂದಾಗಿ ಕೆಆರ್‌ ಸರ್ಕಲ್‌ ಅಂಡರ್‌ ಪಾಸ್‌ನಲ್ಲಿ ನೀರು ತುಂಬಿತ್ತು. ತಿಳಿಯದೆಯೇ ಇವರು ಅಂಡರ್‌ ಪಾಸ್‌ ಮುಖಾಂತರ ಹಾದುಹೋಗಲು ಕಾರು ಚಾಲನೆ ಮಾಡಿದ್ದಾರೆ. ನೀರು ತುಂಬಿದ್ದರಿಂದ ಕಾರು ಅಲ್ಲೇ ಸಿಲುಕಿಕೊಂಡಿದೆ. ನಂತರ ಇವರು ಹೊರಬರಲು ಕಾರಿನ ಗ್ಲಾಜ್‌ ಇಳಿಸಿದ್ದಾರೆ. ಹೀಗೆ ಮಾಡುತ್ತಿದ್ದಂತೆ ನೀರು ಕಾರಿನೊಳಗಡೆ ನುಗ್ಗಿದೆ.ಭಾನುರೇಖಾ ನೀರಿನಲ್ಲಿ ಮುಳುಗಿ ಅಸ್ವಸ್ಥರಾಗಿದ್ದರು.

ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ನೀಡಲು ವೈದ್ಯರು ಮುಂದಾಗಲಿಲ್ಲ ಎಂದು ಕುಟುಂಬದವರು ಆರೋಪಿಸಿದ್ದಾರೆ. ಸೂಕ್ತ ಚಿಕಿತ್ಸೆ ಸಿಗದೇ ಮಹಿಳೆ ಸಾವನ್ನಪ್ಪಿದ್ದಾರೆ.

ಇನ್ಫೋಸಿಸ್‌ ಉದ್ಯೋಗಿಯಾಗಿದ್ದ ಭಾನುರೇಖಾ ಎಂಬ ಮಹಿಳೆ ಮೃತಪಟ್ಟಿದ್ದಾರೆ. ಇವರು ಆಂಧ್ರದ ಕೃಷ್ಣ ಜಿಲ್ಲೆಯ ತೇಲಾಪೋರಲು ಗ್ರಾಮದವರು. ಆಂಧ್ರದಿಂದ ಬೆಂಗಳೂರಿಗೆ ಪ್ರವಾಸಕ್ಕಾಗಿ ಬಂದಿದ್ದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version