ಚಿಕ್ಕಮಗಳೂರಿನಲ್ಲಿ ಭಾರೀ ಮಳೆ: ಜು.3ರಂದು ಈ ತಾಲೂಕುಗಳ ಶಾಲೆಗಳಿಗೆ ರಜೆ

02/07/2025
ಚಿಕ್ಕಮಗಳೂರು: ಮಲೆನಾಡಲ್ಲಿ ಭಾರೀ ಮಳೆಯಾಗುತ್ತಿರೋ ಹಿನ್ನೆಲೆ ಮಲೆನಾಡ ಐದು ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಎನ್.ಆರ್.ಪುರ, ಕೊಪ್ಪ, ಶೃಂಗೇರಿ, ಕಳಸ, ಮೂಡಿಗೆರೆ ತಾಲೂಕಿನಾದ್ಯಂತ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಚಿಕ್ಕಮಗಳೂರು ತಾಲೂಕಿನ ಕೆಲ ಹೋಬಳಿಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಚಿಕ್ಕಮಗಳೂರು ತಾಲೂಕಿನ ಜಾಗರ, ಖಾಂಡ್ಯ, ಆಲ್ದೂರು, ವಸ್ತಾರೆ ಹೋಬಳಿಗಳಿಗೆ ರಜೆ ಘೋಷಿಸಲಾಗಿದೆ.
ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಭಾರೀ ಮಳೆಯ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಚಿಕ್ಕಮಗಳೂರಿನ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಈ ಆದೇಶ ಹೊರಡಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD