ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ: ಆ.4ರಂದು ಈ ತಾಲೂಕುಗಳ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ - Mahanayaka

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ: ಆ.4ರಂದು ಈ ತಾಲೂಕುಗಳ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ

school
03/08/2026

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಿರಂತರವಾಗಿ ಭಾರೀ ಮಳೆಯಾಗುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಜಿಲ್ಲಾ ಆಡಳಿತ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಆಗಸ್ಟ್ 04, 2026 ರಂದು ಜಿಲ್ಲೆಯ ಶಾಲೆ ಹಾಗೂ ಕಾಲೇಜುಗಳಿಗೆ ರಜೆ ಘೋಷಿಸಿ ಅಧಿಕೃತ ಆದೇಶ ಹೊರಡಿಸಿದೆ.

ಮಂಗಳೂರು ಉಪವಿಭಾಗ: ಮಂಗಳೂರು, ಬಂಟವಾಳ, ಮೂಡಬಿದ್ರೆ, ಮುಲ್ಕಿ ಮತ್ತು ಉಳ್ಳಾಲ ತಾಲೂಕುಗಳ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ (10 ನೇ ತರಗತಿವರೆಗೆ, ವಸತಿ ಶಾಲೆಗಳು ಸೇರಿದಂತೆ) ರಜೆ ನೀಡಲಾಗಿದೆ.

ಪುತ್ತೂರು ಉಪವಿಭಾಗ: ಪುತ್ತೂರು, ಬೆಳ್ತಂಗಡಿ, ಸುಳ್ಯ ಮತ್ತು ಕಡಬ ತಾಲೂಕುಗಳ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ, ಪ್ರೌಢಶಾಲೆಗಳು, ಪದವಿ ಪೂರ್ವ ಕಾಲೇಜುಗಳು, ITI ಹಾಗೂ ಡಿಪ್ಲೊಮಾ ಕಾಲೇಜುಗಳಿಗೆ (12 ನೇ ತರಗತಿವರೆಗೆ, ವಸತಿ ಶಾಲೆ-ಕಾಲೇಜುಗಳು ಸೇರಿದಂತೆ) ರಜೆ ಘೋಷಿಸಲಾಗಿದೆ. ಈ ಆದೇಶವನ್ನು ಉಲ್ಲಂಘಿಸಿದವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005 ರ ಪ್ರಕಾರ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಲಾಗಿದೆ.

ಜಿಲ್ಲಾಡಳಿತ ಪ್ರಮುಖ ಸೂಚನೆಗಳು:

  • ತಗ್ಗು ಪ್ರದೇಶ, ಕೆರೆ, ನದಿ ಹಾಗೂ ಸಮುದ್ರ ತೀರಕ್ಕೆ ಮಕ್ಕಳು ತೆರಳದಂತೆ ಪೋಷಕರು ಜಾಗ್ರತೆ ವಹಿಸಬೇಕು.
  • ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.
  • ಪ್ರವಾಸಿಗರು ಮತ್ತು ಸಾರ್ವಜನಿಕರು ನದಿ ಹಾಗೂ ಸಮುದ್ರ ತೀರಕ್ಕೆ ತೆರಳಬಾರದು.
  • ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು, ವಿಪತ್ತು ನಿರ್ವಹಣೆ ಕಾರ್ಯಾಚರಣೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು.
  • ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಪ್ರತಿಯೊಂದು ತಾಲೂಕಿನಲ್ಲಿ ಕಾಳಜಿ ಕೇಂದ್ರಗಳನ್ನು ತೆರೆದು ಸಜ್ಜಾಗಿರಿಸಲು ಸೂಚಿಸಲಾಗಿದೆ.

ತುರ್ತು ನೆರವಿಗೆ ಸಂಪರ್ಕ ಸಂಖ್ಯೆ:

ಮಳೆ ಅಥವಾ ವಿಪತ್ತಿಗೆ ಸಂಬಂಧಿಸಿದ ಯಾವುದೇ ಸಮಸ್ಯೆಗಳಿದ್ದಲ್ಲಿ ಸಾರ್ವಜನಿಕರು ಉಚಿತ ದೂರವಾಣಿ ಸಂಖ್ಯೆ 1077 ಅಥವಾ 0824-2442590 ಅನ್ನು ಸಂಪರ್ಕಿಸಬಹುದು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ