ಕೇರಳದ ವಯನಾಡ್ ನಲ್ಲಿ ಭಾರಿ ಮಳೆ: ಕಲ್ಲಾಡಿಯಲ್ಲಿ ಭೂಕುಸಿತ, ಹಲವರು ಸಿಲುಕಿರುವ ಶಂಕೆ
ಕಲ್ಪೆಟ್ಟಾ (ಕೇರಳ): ಕೇರಳದ ವಯನಾಡ್ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಕಲ್ಲಾಡಿ ಎಂಬಲ್ಲಿ ಭೀಕರ ಭೂಕುಸಿತ ಸಂಭವಿಸಿದೆ. ಕಲ್ಲಾಡಿಯ ಮೀನಾಕ್ಷಿ ಸೇತುವೆಯ ಬಳಿ ಈ ಘಟನೆ ನಡೆದಿದ್ದು, ಪ್ರಸ್ತುತ ಹಲವರು ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ಕಾರ್ಮಿಕನ ರಕ್ಷಣೆ: ಭೂಕುಸಿತದ ಅವಶೇಷಗಳ ಅಡಿಯಿಂದ ಸದ್ಯಕ್ಕೆ ಓರ್ವ ವ್ಯಕ್ತಿಯನ್ನು ರಕ್ಷಿಸಲಾಗಿದೆ. ಆತ ಅಲ್ಲಿನ ನಿರ್ಮಾಣ ಕಾರ್ಮಿಕ ಎಂದು ಪ್ರಾಥಮಿಕವಾಗಿ ಗುರುತಿಸಲಾಗಿದೆ. ಮಣ್ಣಿನ ಅಡಿಯಲ್ಲಿ ಮತ್ತಷ್ಟು ಜನರು ಸಿಲುಕಿಕೊಂಡಿದ್ದಾರೆಯೇ ಎಂಬುದನ್ನು ಪತ್ತೆಹಚ್ಚಲು ಅಧಿಕಾರಿಗಳು ಸ್ಥಳದಲ್ಲಿ ತೀವ್ರ ತಪಾಸಣೆ ನಡೆಸುತ್ತಿದ್ದಾರೆ.
ನಿರ್ಮಾಣ ಹಂತದಲ್ಲಿರುವ ಸುರಂಗ ಮಾರ್ಗದ ಹತ್ತಿರವೇ ಈ ಭೂಕುಸಿತ ಸಂಭವಿಸಿರುವುದರಿಂದ, ಆ ರಸ್ತೆಯಲ್ಲಿ ವಾಹನ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿದೆ.
ತುರ್ತು ರಕ್ಷಣಾ ಕಾರ್ಯಾಚರಣೆಗಾಗಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF) ತಂಡವು ಈಗಾಗಲೇ ಘಟನಾ ಸ್ಥಳಕ್ಕೆ ಧಾವಿಸಿದೆ. ಪರಿಸ್ಥಿತಿಯನ್ನು ಎದುರಿಸಲು ಮತ್ತು ಸಂತ್ರಸ್ತರ ನೆರವಿಗೆ ಧಾವಿಸಲು ಅಗತ್ಯವಿರುವ ಎಲ್ಲಾ ತುರ್ತು ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿರುವಂಬಾಡಿ ಕ್ಷೇತ್ರದ ಶಾಸಕ ಸಿ.ಕೆ. ಕಾಸಿಂ ತಿಳಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD























