ಪಶ್ಚಿಮ ಘಟ್ಟಗಳ ಸಾಲಲ್ಲಿ ಭಾರೀ ಮಳೆ: ನದಿ ಹರಿವಿನ ಮಟ್ಟದಲ್ಲಿ ಭಾರೀ ಏರಿಕೆ

ಚಿಕ್ಕಮಗಳೂರು: ಕಾಫಿನಾಡ ಪಶ್ಚಿಮ ಘಟ್ಟಗಳ ಸಾಲಲ್ಲಿ ಭಾರೀ ಮಳೆಯಾಗಿದ್ದು, ಕುದುರೆಮುಖ ಘಟ್ಟ ಪ್ರದೇಶದಲ್ಲಿ ಧಾರಾಕಾರ ಮಳೆಯಾಗಿದೆ. ಮಳೆ ಅಬ್ಬರಕ್ಕೆ ಭದ್ರಾ ನದಿ ಹರಿವಿನ ಮಟ್ಟದಲ್ಲಿ ಭಾರೀ ಏರಿಕೆಯಾಗಿದೆ.
ಹರಿವಿನ ಮಟ್ಟದಲ್ಲಿ ಏರಿಕೆಯಾಗಿರುವ ಹಿನ್ನೆಲೆ ಕಳಸ ತಾಲೂಕಿನ ಹೆಬ್ಬಾಳೆ ಸೇತುವೆ ಮುಳುಗುವ ಹಂತದಲ್ಲಿದೆ. ಹೆಬ್ಬಾಳೆ ಸೇತುವೆ ಮುಳುಗಡೆಗೆ 4-5 ಅಡಿಯಷ್ಟೇ ಬಾಕಿಯಿದೆ.
ಹೆಬ್ಬಾಳೆ ಸೇತುವೆ ಮುಳುಗಡೆಯಾದರೆ ಹತ್ತಾರು ಹಳ್ಳಿಗಳ ಸಂಪರ್ಕ ಬಂದ್ ಆಗುವ ಸಾಧ್ಯತೆ ಇದೆ. ಕಳಸ–ಹೊರನಾಡು ಅನ್ನಪೂರ್ಣೇಶ್ವರಿ ದೇಗುಲದ ಮಾರ್ಗವೂ ಬಂದ್ ಆಗಲಿದೆ.
ಇನ್ನೊಂದೆಡೆ ಶೃಂಗೇರಿ ತಾಲೂಕಿನ ಕೆರೆಕಟ್ಟೆ ಭಾಗದಲ್ಲೂ ಭಾರೀ ಮಳೆಯಾಗುತ್ತಿದೆ. ಹೀಗಾಗಿ ತುಂಗಾ ನದಿಯ ಒಳ ಹರಿವಿನ ಪ್ರಮಾಣದಲ್ಲೂ ಏರಿಕೆಯಾಗಿದೆ. ನಿರಂತರ ಮಳೆಯಿಂದ ನಾಡಿನ ಜೀವನದಿಗಳ ಒಳಹರಿವಿನ ಪ್ರಮಾಣದಲ್ಲಿ ಹೆಚ್ಚಳವಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/JItjEWZ9e5fBWDL6CkTr97