ಅಕ್ಟೋಬರ್ 29ರವರೆಗೂ ಮುಂದುವರಿಯಲಿದೆ ಮಳೆ ಅಬ್ಬರ: ಈ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ! - Mahanayaka

ಅಕ್ಟೋಬರ್ 29ರವರೆಗೂ ಮುಂದುವರಿಯಲಿದೆ ಮಳೆ ಅಬ್ಬರ: ಈ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ!

rain
26/10/2025

ಬೆಂಗಳೂರು: ದೀಪಾವಳಿ ಕಳೆದರೂ ಈ ಬಾರಿ ಮಳೆ ನಿಲ್ಲುವ ಲಕ್ಷಣ ಕಾಣ್ತಾ ಇಲ್ಲ, ರಾಜ್ಯದಲ್ಲಿ ಈ ಬಾರಿ ಉತ್ತಮ ಮಳೆಯಾಗುತ್ತಿದ್ದು, ಅಕ್ಟೋಬರ್ 29ರವರೆಗೂ ಹೆಚ್ಚಿನ ಮಳೆಯಾಗಲಿದೆ ಅಂತ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆಯ ಕೆಲವು ಭಾಗಗಳಲ್ಲಿ ಅಕ್ಟೋಬರ್ 29ರ ವರೆಗೂ ಮಳೆಯಾಗಲಿದೆ.  ಉತ್ತರ ಕನ್ನಡದಲ್ಲಿ ಇಂದು ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.  ಅಕ್ಟೋಬರ್ 28 ಹಾಗೂ 29ರಂದು ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆ ನಿರೀಕ್ಷಿಸಲಾಗಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಚಿಕ್ಕಮಗಳೂರು, ದಾವಣಗೆರೆ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು ಎಲ್ಲೋ ಅಲರ್ಟ್ ನೀಡಲಾಗಿದೆ. ಇನ್ನು ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆ ನಿರೀಕ್ಷಿಸಲಾಗಿದೆ.

ಬೆಂಗಳೂರಲ್ಲಿ ಮುಂದಿನ 48 ಗಂಟೆಗಳು ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು ಹಗುರ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ತಾಪಮಾನ 28°C ಮತ್ತು ಕನಿಷ್ಠ ತಾಪಮಾನ 20°C ಇರಲಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ