12:51 PM Saturday 23 - August 2025

ಓವರ್ ಟೇಕ್ ಮಾಡಲು ಬಿಡದ ಕಾರಿನ ಮೇಲೆ ಹೆಲ್ಮೆಟ್ ನಿಂದ ದಾಳಿ: ಮಗುವಿಗೆ ಗಾಯ

bangalore
23/05/2024

ಬೆಂಗಳೂರು: ಕೇರಳ ಮೂಲದ ದಂಪತಿ ಹಾಗೂ ಅವರ ಮೂವರು ವರ್ಷದ ಮಗಳು ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ಬೈಕ್ ಸವಾರನೊಬ್ಬ ಹೆಲ್ಮೆಟ್ ನಿಂದ ದಾಳಿ ನಡೆಸಿದ ಘಟನೆ ಸರ್ಜಾಪುರ ರಸ್ತೆಯಲ್ಲಿ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಕಾರು ಮಾಲೀಕ ವರ್ತೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಓವರ್ ಟೇಕ್ ಮಾಡಲು ಜಾಗ ಬಿಡಲಿಲ್ಲ ಎಂದು ಕೋಪಗೊಂಡ ಬೈಕ್ ಸವಾರ  ಕಾರಿನ ಮೇಲೆ ಹೆಲ್ಮೆಟ್ ನಿಂದ ದಾಳಿ ನಡೆಸುತ್ತಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಕೇರಳ ಮೂಲದ ಐಟಿ ವೃತ್ತಿಪರ ಅಖಿಲ್ ಸಾಬು ತನ್ನ ಪತ್ನಿ ಹಾಗೂ ಮೂರು ವರ್ಷದ ಮಗಳ ಜೊತೆಗೆ ಸರ್ಜಾಪುರ ರಸ್ತೆಯಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಈ ಘಟನೆ ನಡೆದಿದೆ.  ದಾಳಿಯ ಪರಿಣಾಮ  ಕಾರಿನ ಗಾಜು ಒಡೆದು ಮಗುವಿಗೆ ಗಾಯಗಳಾಗಿವೆ ಎಂದು ದೂರಿನಲ್ಲಿ ಅಖಿಲ್ ತಿಳಿಸಿದ್ದಾರೆ. ಆರೋಪಿಯನ್ನು ಸ್ಥಳೀಯ ನಿವಾಸಿ ಜಗದೀಶ್ ಎಂದು ಗುರುತಿಸಲಾಗಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಫೇಸ್ ಬುಕ್ ಪೇಜ್ ಫಾಲೋ ಮಾಡಿ: https://www.facebook.com/profile.php?id=61556202767068

ಇತ್ತೀಚಿನ ಸುದ್ದಿ

Exit mobile version