ಹಿಂದುತ್ವದಿಂದ ಚುನಾವಣೆ ಗೆಲ್ಲಬಹುದು ಎನ್ನುವ ಬಿಜೆಪಿಯ ನಿರೀಕ್ಷೆಗೆ ಶಾಕ್ ನೀಡಿದ ಯಡಿಯೂರಪ್ಪ ಹೇಳಿಕೆ!

ಬೆಂಗಳೂರು: ರಾಜ್ಯದಲ್ಲಿ ಹಿಂದುತ್ವದ ಆಧಾರದಲ್ಲಿ ಮುಂದಿನ ವಿಧಾನಸಭಾ ಚುನಾವಣೆ ಸುಲಭವಾಗಿ ಗೆಲ್ಲಬಹುದು ಎನ್ನುವ ಲೆಕ್ಕಚಾರದಲ್ಲಿ ಬಿಜೆಪಿ ಇದ್ದರೆ, ಇತ್ತ ಬಿ.ಎಸ್ .ಯಡಿಯೂರಪ್ಪ ಹೇಳಿಕೆ ಇದೀಗ ಬಿಜೆಪಿಯಲ್ಲಿ ಹಲವು ಚರ್ಚೆಗಳನ್ನು ಹುಟ್ಟು ಹಾಕಿದ್ದಾರೆ.
ಚುನಾವಣೆ ಸಂದರ್ಭದಲ್ಲಿ ಸಾಕಷ್ಟು ಪ್ರಯೋಗಗಳನ್ನು ಮಾಡುತ್ತಿರುವ ಬಿ.ಎಸ್.ಯಡಿಯೂರಪ್ಪನವರು ಹೊಸಪೇಟೆಯಲ್ಲಿ ಎರಡು ದಿನಗಳ ಕಾಲ ನಡೆದ ಕಾರ್ಯಕಾರಿಣಿಯಲ್ಲಿ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರಿಗೆ ಸೈಲೆಂಟಾಗಿ ವಾರ್ನಿಂಗ್ ನೀಡಿದ್ದಾರೆ.
“ಭ್ರಮೆಯ ಪೊರೆ ಕಳಚಿ” ಎಂಬ ಪದಕ್ಕೆ ಯಡಿಯುರಪ್ಪನವರು ಹೆಚ್ಚಿನ ಒತ್ತು ನೀಡಿದ್ದು, ಮುಂದಿನ ಚುನಾವಣೆಗೆ ನನ್ನ ಅನಿವಾರ್ಯತೆ ಇದೆ ಎನ್ನುವುದನ್ನು ಯಡಿಯೂರಪ್ಪನವರು ಹೇಳಿದ್ದಾರೆ.
ಚುನಾವಣೆಯನ್ನು ಗೆದ್ದೇ ಬಿಟ್ಟಿದ್ದೇವೆ ಎನ್ನುವ ಭ್ರಮೆಯಿಂದ ಮೊದಲು ಆಚೆ ಬನ್ನಿ, ಭ್ರಮೆಯ ಪೊರೆ ಕಳಚಿ, ತಳಹಂತದಲ್ಲಿ ಬೇರೆಯೇ ಆದ ವಾತಾವರಣ ಇದೆ ಎನ್ನುವುದನ್ನು ಮರೆಯಬೇಡಿ ಎನ್ನುವ ಎಚ್ಚರಿಕೆಯನ್ನು ಬಿಜೆಪಿ ನಾಯಕರಿಗೆ ಹಾಗೂ ಕಾರ್ಯಕರ್ತರಿಗೆ ನೀಡಿದ್ದಾರೆ.
ಮೊದಲು ಪರಿಶಿಷ್ಟ ಜಾತಿ ಹಾಗೂ ಪಂಗಡದ ಸಂಘಟನೆಗೆ ಹೆಚ್ಚಿನ ಒತ್ತು ನೀಡಿ ಎನ್ನುವ ಮೂಲಕ ಬಿಜೆಪಿ ಸರ್ಕಾರ ಎಸ್ ಸಿ, ಎಸ್ ಟಿಗೆ ಹೆಚ್ಚಿನ ಒತ್ತು ನೀಡುತ್ತಿಲ್ಲ ಎನ್ನುವುದನ್ನು ಪ್ರತಿಪಾದಿಸಿದರು. ಸರ್ಕಾರದ ಯೋಜನೆಗಳನ್ನು ಈ ವರ್ಗಕ್ಕೆ ತಲುಪಿಸಬೇಕು. ಇಲ್ಲವಾದರೆ ಮುಂದಿನ ಚುನಾವಣೆಯಲ್ಲಿ ಇದು ಪರಿಣಾಮ ಬೀರಬಹುದು ಎನ್ನುವ ಎಚ್ಚರಿಕೆ ನೀಡಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ https://chat.whatsapp.com/FZkISFWKknBDvdYkMVFArW
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಪರ್ಸಂಟೇಜ್ ಪಿತಾಮಹಾ ಸಿದ್ದರಾಮಯ್ಯ: ಕುಮಾರಸ್ವಾಮಿ ಟ್ವೀಟ್ ಬಾಣ
ಮಂಗಳೂರು: ಮೀನಿನ ಫ್ಯಾಕ್ಟರಿಯಲ್ಲಿ ವಿಷಾನಿಲ ಸೋರಿಕೆ: ಐವರು ಕಾರ್ಮಿಕರ ದಾರುಣ ಸಾವು
ಮಹಿಳೆಯ ಮೇಲೆಯೇ ಹರಿದ ಕೆಎಸ್ಸಾರ್ಟಿಸಿ ಬಸ್: ಮಹಿಳೆಯ ದಾರುಣ ಸಾವು
ಹುಬ್ಬಳ್ಳಿ ಅಹಿತಕರ ಘಟನೆ: 40 ಮಂದಿ ಪೊಲೀಸ್ ವಶಕ್ಕೆ