ಅಮಿತ್ ಶಾರ ಜಮ್ಮು-ಕಾಶ್ಮೀರ ಭೇಟಿಯನ್ನು ಪ್ರಶ್ನಿಸಿದ ಉಮರ್ ಅಬ್ದುಲ್ಲಾ, ಮೆಹಬೂಬಾ ಮುಫ್ತಿ

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಗುರುವಾರದಿಂದ ಎರಡು ದಿನಗಳ ಶ್ರೀನಗರ ಪ್ರವಾಸದಲ್ಲಿದ್ದು, ಈ ಸಂದರ್ಭದಲ್ಲಿ ಭದ್ರತಾ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸುವ ಸಾಧ್ಯತೆಯಿದೆ ಎಂದು ಹಿರಿಯ ಬಿಜೆಪಿ ಮುಖಂಡ ಮತ್ತು ಕಾಶ್ಮೀರ ಉಸ್ತುವಾರಿ ಸುನಿಲ್ ಶರ್ಮಾ ಅವ್ರು ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಶರ್ಮಾ, ಶ್ರೀನಗರಕ್ಕೆ ಭೇಟಿ ನೀಡುವ ಸಂದರ್ಭದಲ್ಲಿ ಅಮಿತ್ ಶಾ ಹಲವಾರು ನಿಯೋಗಗಳನ್ನು ಭೇಟಿ ಮಾಡಲಿದ್ದಾರೆ ಎಂದು ಹೇಳಿದರು. “ಗುಜ್ಜರ್, ಬೇಕರ್ವಾಲ್, ದಾಲ್ ನಿವಾಸಿಗಳು ಮತ್ತು ಇತರ ವಿವಿಧ ಸಮುದಾಯಗಳ ಜನರು ಅವರನ್ನು ಭೇಟಿಯಾಗಬಹುದು. ಯಾಕೆಂದರೆ ಅವರನ್ನು ಭೇಟಿಯಾಗಲು ಯಾರಿಗೂ ಯಾವುದೇ ನಿರ್ಬಂಧಗಳಿಲ್ಲ” ಎಂದು ಅವರು ಹೇಳಿದ್ದಾರೆ.
ಈ ಮಧ್ಯೆ ಉಮರ್ ಅಬ್ದುಲ್ಲಾ ಮತ್ತು ಮೆಹಬೂಬಾ ಮುಫ್ತಿ ಅವರು ಅಮಿತ್ ಶಾ ಅವರ ಕಾಶ್ಮೀರ ಭೇಟಿಯನ್ನು ಪ್ರಶ್ನಿಸಿದ್ದಾರೆ. ಮಾದರಿ ನೀತಿ ಸಂಹಿತೆಯ ಸಮಯದಲ್ಲಿ ಗೃಹ ಸಚಿವರು ಇಲ್ಲಿಗೆ ಯಾಕೆ ಬರ್ತಿದ್ದಾರೆ ಎಂಬುದು ಅರ್ಥವಾಗುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ. ಈ ಚುನಾವಣೆಯಲ್ಲಿ ಬಿಜೆಪಿಗೆ ಯಾವುದೇ ಅಭ್ಯರ್ಥಿಗಳು ಸ್ಪರ್ಧಿಸದ ಕಾರಣ, ಅವರು ಪ್ರಚಾರ ಮಾಡಲು ಇಲ್ಲಿಗೆ ಬಂದಿಲ್ಲ. ಅವರ ಪ್ರಾಕ್ಸಿ ಪಕ್ಷಗಳನ್ನು ಬೆಂಬಲಿಸಲು ಅವರು ಇಲ್ಲಿದ್ದಾರೆಯೇ..? ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಾರೆ.
ಬಂಡಿಪೋರಾದಲ್ಲಿ ತಮ್ಮ ಚುನಾವಣಾ ಪ್ರಚಾರ ರ್ಯಾಲಿಯ ಹೊರತಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ನ್ಯಾಷನಲ್ ಕಾನ್ಫರೆನ್ಸ್ ಉಪಾಧ್ಯಕ್ಷ ಉಮರ್ ಅಬ್ದುಲ್ಲಾ, “ಮೊದಲನೆಯದಾಗಿ, ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಅವರ (ಎಚ್ಎಂ) ಭೇಟಿಯ ಉದ್ದೇಶವೇನೆಂದು ನನಗೆ ಅರ್ಥವಾಗುತ್ತಿಲ್ಲ. ಗೃಹ ಸಚಿವರಾಗಿ ಅವರು ರಾಜಕೀಯ ಮೌಲ್ಯದೊಂದಿಗೆ ಯಾವುದೇ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಿಲ್ಲ. ಅವರು ಪ್ರಚಾರ ಮಾಡಲು ಯಾವುದೇ ಬಿಜೆಪಿ ಅಭ್ಯರ್ಥಿ ಇಲ್ಲ. ಹಾಗಾದರೆ, ಅವರು ಕೆಲವು ಅಭ್ಯರ್ಥಿಗಳನ್ನು ಅಥವಾ ಪಕ್ಷಗಳನ್ನು ಬೆಂಬಲಿಸಲು ಇಲ್ಲಿಗೆ ಬಂದಿದ್ದಾರೆಯೇ? ಅವರು ತಮ್ಮ ಪ್ರಾಕ್ಸಿ ಪಕ್ಷಗಳಿಗೆ ಮತ ಕೇಳಲು ಇಲ್ಲಿಗೆ ಬಂದಿದ್ದಾರೆಯೇ.? ಎಂದು ಪ್ರಶ್ನಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth