ಗುಡುಗು ಸಹಿತ ಮಳೆ: ಹೀಗಿದೆ ಹವಾಮಾನ ಮುನ್ಸೂಚನೆ

rain
03/11/2024

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದ್ದರೆ, ಉತ್ತರ ಕನ್ನಡ ಜಿಲ್ಲೆಯ ಉತ್ತರ ಕನ್ನಡ – ಗೋವಾ ಗಡಿಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ಈಗಿನಂತೆ ನವೆಂಬರ್ 5ರಿಂದ ಹಿಂಗಾರು ಮಳೆಯ ಕಡಿಮೆಯಾಗಲಿದ್ದು, ನವೆಂಬರ್ 8 ಅಥವಾ 9ರಿಂದ ಮತ್ತೆ ಮಳೆ ಚುರುಕಾಗುವ ಲಕ್ಷಣಗಳಿವೆ.

ಮಲೆನಾಡು : ಕೊಡಗಿನ ಹೆಚ್ಚಿನ ಭಾಗಗಳಲ್ಲಿ ಮಧ್ಯಾಹ್ನ ನಂತರ, ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳ ಸುತ್ತಮುತ್ತ ಮಧ್ಯಾಹ್ನ ನಂತರ, ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. ಶಿವಮೊಗ್ಗ ಜಿಲ್ಲೆಯ ಅಲ್ಲಲ್ಲಿ ಸಂಜೆ, ರಾತ್ರಿ ಮೋಡ ಅಥವಾ ತುಂತುರು ಮಳೆಯ ಸಾಧ್ಯತೆ ಇದೆ.

ಈಗಿನಂತೆ ನವೆಂಬರ್ 5ರಿಂದ 7ರ ತನಕ ಮಳೆ ಕಡಿಮೆಯಾಗಲಿದ್ದು, 8 ಅಥವಾ 9ರಿಂದ ಹಿಂಗಾರು ಮತ್ತೆ ಚುರುಕಾಗುವ ಲಕ್ಷಣಗಳಿವೆ.

ಒಳನಾಡು : ಉತ್ತರ ಒಳನಾಡಿನ ಧಾರವಾಡ, ಬೆಳಗಾವಿ, ಬಾಗಲಕೋಟೆ ಹಾಗೂ ಗದಗ ಜಿಲ್ಲೆಯ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ

Exit mobile version