ತಿರುಪತಿಯಲ್ಲಿ ಚಲಿಸುತ್ತಿದ್ದ ರೈಲಿನಡಿಗೆ ಬೀಳುತ್ತಿದ್ದ ವ್ಯಕ್ತಿಯನ್ನು ರಕ್ಷಿಸಿದ ಪೊಲೀಸ್ ಸಿಬ್ಬಂದಿ

ಇಬ್ಬರು ರೈಲ್ವೆ ಪೊಲೀಸ್ ಕಾನ್ಸ್ ಟೇಬಲ್ ಗಳು ಇಂದು ತಿರುಪತಿ ರೈಲ್ವೆ ನಿಲ್ದಾಣದಲ್ಲಿ ಚಲಿಸುತ್ತಿರುವ ರೈಲಿನ ಪಕ್ಕದಲ್ಲಿ ಸಿಲುಕಿದ್ದ ಪ್ರಯಾಣಿಕನನ್ನು ರಕ್ಷಿಸಿದ್ದಾರೆ. ಈ ಘಟನೆಯು ನಿಲ್ದಾಣದಲ್ಲಿನ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಸ್ವರ್ಣ ಜಯಂತಿ ಎಕ್ಸ್ ಪ್ರೆಸ್ ನಿಲ್ದಾಣದಲ್ಲಿ ನಿಲ್ಲಲು ಬರುತ್ತಿರುವಾಗ ಸ್ವಪನ್ ಕುಮಾರ್ ರಾಯ್ ಎಂಬುವವರ ಕಾಲು ಚೀಲದಲ್ಲಿ ಸಿಕ್ಕಿಹಾಕಿಕೊಂಡು ಪ್ಲಾಟ್ ಫಾರ್ಮ್ ನಲ್ಲಿ ರೈಲಿನ ನಡುವೆ ಜಾರಿ ಬೀಳುವುದನ್ನು ಕಂಡ ಕರ್ತವ್ಯ ನಿರತ ಆರ್ ಪಿಎಫ್ ಸಿಬ್ಬಂದಿ ಲೋಕಾನಂದಂ ಮತ್ತು ಕುಮ್ ಎಂಬುವವರು ತಕ್ಷಣ ಕಾರ್ಯಪ್ರವೃತ್ತರಾಗಿ, ಅವರನ್ನು ಎಳೆದಿದ್ದಾರೆ. ವೆಲ್ಲೂರು ಕಟ್ಪಾಡಿ ಜಂಕ್ಷನ್ ರೈಲ್ವೆ ನಿಲ್ದಾಣದಿಂದ ತಿರುಪತಿ ಸೆಂಟ್ರಲ್ ರೈಲ್ವೆ ನಿಲ್ದಾಣಕ್ಕೆ ಸಾಮಾನ್ಯ ಟಿಕೆಟ್ ನಲ್ಲಿ ಸಾಮಾನ್ಯ ಬೋಗಿಯಲ್ಲಿ ಈ ವ್ಯಕ್ತಿ ಪ್ರಯಾಣಿಸಲು ಬಂದಿದ್ದ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw