6:22 PM Thursday 13 - November 2025

ಕೊನೆಗೂ ಆರ್‌ ಎಸ್‌ ಎಸ್‌ ಪಥ ಸಂಚಲನಕ್ಕೆ ಹೈಕೋರ್ಟ್ ಷರತ್ತುಬದ್ಧ ಅನುಮತಿ

rss
13/11/2025

ಕಲಬುರಗಿ: ಜಿಲ್ಲೆಯ ಚಿತ್ತಾಪುರದಲ್ಲಿ ಆರ್‌ ಎಸ್‌ ಎಸ್‌ ನಡೆಸಲು ಉದ್ದೇಶಿಸಿದ್ದ ಪಥಸಂಚಲನಕ್ಕೆ ಕರ್ನಾಟಕ ಹೈಕೋರ್ಟ್‌ನ ಕಲಬುರಗಿ ಪೀಠ ಷರತ್ತುಬದ್ಧ ಅನುಮತಿ ನೀಡಿದೆ.

ನವೆಂಬರ್ 16ರ ಭಾನುವಾರ ಮಧ್ಯಾಹ್ನ 3 ಗಂಟೆಯಿಂದ ಸಂಜೆ 5.30ರ ತನಕ ಗಣವೇಷಧಾರಿಗಳ ಪಥಸಂಚಲನಕ್ಕೆ ಹೈಕೋರ್ಟ್ ಅವಕಾಶ ನೀಡಿದೆ.

ಈ ಸಂಬಂಧ ಅರ್ಜಿ ವಿಚಾರಣೆ ನಡೆಸಿದ ಕಲಬುರಗಿ ಹೈಕೋರ್ಟ್‌ ಪೀಠದ ನ್ಯಾಯಮೂರ್ತಿ ಎಂ.ಜಿ.ಎಸ್.ಕಮಲ್ ಅವರಿದ್ದ ಏಕ ಸದಸ್ಯ ನ್ಯಾಯಪೀಠವು, ‘ಪಥಸಂಚಲನದಲ್ಲಿ 300 ಮಂದಿ ಗಣವೇಷಧಾರಿಗಳು ಹಾಗೂ 50 ಮಂದಿ ಘೋಷ್ ವೃಂದಕ್ಕೆ ಅವಕಾಶ ನೀಡಲಾಗಿದೆ’ ಎಂದು ಆದೇಶ ನೀಡಿ ಅರ್ಜಿ ಇತ್ಯರ್ಥಗೊಳಿಸಿದರು.

ಕಳೆದ ಅಕ್ಟೋಬರ್ 19ರಂದು ಚಿತ್ತಾಪುರದಲ್ಲಿ ಆರ್ ಎಸ್ ಎಸ್ ಪಥಸಂಚಲನ ನಡೆಸಲು ಅನುಮತಿ ಕೋರಿತ್ತು. ಆದರೆ, ಇನ್ನೆರಡು ಸಂಘಟನೆಗಳು ಅದೇ ದಿನ ಅನುಮತಿ ಕೋರಿದ್ದರಿಂದ ಚಿತ್ತಾಪುರ ತಹಶೀಲ್ದಾರ್ ಅನುಮತಿ ನಿರಾಕರಿಸಿದ್ದರು. ಅದನ್ನು ಪ್ರಶ್ನಿಸಿ ಆರ್‌ಎಸ್‌ಎಸ್‌ ಜಿಲ್ಲಾ ಸಂಘಚಾಲಕ ಅಶೋಕ ಪಾಟೀಲ ಹೈಕೋರ್ಟ್ ಮೊರೆಹೋಗಿದ್ದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

Exit mobile version