5 ಮತ್ತು 8ನೇ ತರಗತಿ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್  ಗ್ರೀನ್ ಸಿಗ್ನಲ್ - Mahanayaka

5 ಮತ್ತು 8ನೇ ತರಗತಿ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್  ಗ್ರೀನ್ ಸಿಗ್ನಲ್

high court
15/03/2023


Provided by

ಬೆಂಗಳೂರು:  ರಾಜ್ಯದಲ್ಲಿ 5 ಮತ್ತು 8ನೇ ತರಗತಿ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ  ಅನುಮತಿ ನೀಡಿ ತೀರ್ಪು ಪ್ರಕಟಿಸಿದೆ.

5 ಮತ್ತು 8ನೇ ತರಗತಿ ಬೋರ್ಡ್ ಪರೀಕ್ಷೆ ರದ್ದು ಮಾಡಿದ್ದ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ, 5 ಮತ್ತು 8ನೇ ತರಗತಿ ಬೋರ್ಡ್ ಪರೀಕ್ಷೆಗೆ ಗ್ರೀನ್ ಸಿಗ್ನಲ್ ನೀಡಿದೆ.

ಏಕಸದಸ್ಯ ಪೀಠದ ಆದೇಶಕ್ಕೆ ತಡೆ ನೀಡಿದ ಹೈಕೋರ್ಟ್ ವಿಭಾಗೀಯ ಪೀಠ, ಬೋರ್ಡ್ ಪರೀಕ್ಷೆ ನಡೆಸಲು ಶಿಕ್ಷಣ ಕಾಯ್ದೆಯಡಿ ನಿರ್ಬಂಧವಿಲ್ಲ. 10 ದಿನಗಳ ಬಳಿಕ ಪರೀಕ್ಷೆ ನಡೆಸುವಂತೆ ಸೂಚನೆ ನೀಡಿತು.

ಪಠ್ಯಕ್ರಮ ಬಿಟ್ಟು ಬೇರೆ ಪ್ರಶ್ನೆ ಕೇಳವಂತಿಲ್ಲ.  ಪರೀಕ್ಷೆ ಫಲಿತಾಂಶವನ್ನ ಸಾರ್ವಜನಿಕವಾಗಿ ಪ್ರಕಟಿಸುವಂತಿಲ್ಲ. ಫಲಿತಾಂಶವನ್ನ ಶಾಲೆಗೆ ತಲುಪಿಸಬೇಕು ಎಂದು ವಿಭಾಗೀಯ ಪೀಠ ಸೂಚನೆಯನ್ನ ನೀಡಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ