ಚಕ್ರವರ್ತಿ ಸೂಲಿಬೆಲೆ ವಿರುದ್ಧದ ಎಫ್ ಐಆರ್ ಗೆ ಹೈಕೋರ್ಟ್ ತಡೆಯಾಜ್ಞೆ!

30/01/2024
ಕಲಬುರಗಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಮಾನಹಾನಿಕರ ಹೇಳಿಕೆ ನೀಡಿರುವ ಸಂಬಂಧ ದಾಖಲಾಗಿದ್ದ ಎಫ್ ಐಆರ್ ಗೆ ಕರ್ನಾಟಕ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ಹೈಕೋರ್ಟ್ನ ಕಲಬುರಗಿ ವಿಭಾಗೀಯ ಪೀಠದ ಏಕ ಸದಸ್ಯ ಪೀಠದ ನ್ಯಾಯಮೂರ್ತಿ ರಾಜೇಂದ್ರ ಬಾದಾಮಿಕರ್ ಪೀಠವು ಎಫ್ ಐಆರ್ ಗೆ ತಡೆಯಾಜ್ಞೆ ನೀಡಿ ಆದೇಶ ನೀಡಿದೆ.
‘ಅಯೋಗ್ಯ’ ಎನ್ನುವ ಹೇಳಿಕೆ ಯಾವ ಜಾತಿಗೂ ಅನ್ವಯವಾಗುದಿಲ್ಲ. ಅಷ್ಟೇ ಅಲ್ಲದೆ, ಯಾರ ಜಾತಿ ನಿಂದನೆ ಆಗಿದೆಯೋ ಅವರು ದೂರು ನೀಡಿಲ್ಲ. ರಾಜಕೀಯ ಪಕ್ಷದ ಜಿಲ್ಲಾಧ್ಯಕ್ಷರು ದೂರು ನೀಡಿದ್ದಾರೆ ಎಂದು ಕೋರ್ಟ್ ಆದೇಶದಲ್ಲಿ ಹೇಳಿದೆ ಎಂದು ವರದಿಯಾಗಿದೆ.