ಸಿಎಂ ಸಿದ್ದರಾಮಯ್ಯಗೆ ಹೈಕೋರ್ಟ್‌ನಿಂದ ನೋಟಿಸ್‌ ಜಾರಿ

siddaramaiah
28/07/2023

ಬೆಂಗಳೂರು:ಹೈಕೋರ್ಟ್‌ ಸಿಎಂಗೆ ನೋಟಿಸ್‌ ಜಾರಿ ಮಾಡಿದ್ದು, ಶಾಸಕ ಸ್ಥಾನವನ್ನು ಅಸಿಂಧುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಗೆ ಹೈಕೋರ್ಟ್‌ ಸಿಎಂ ಸಿದ್ದರಾಮಯ್ಯಗೆ ನೋಟಿಸ್‌ ಜಾರಿ ಮಾಡಿದೆ.

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ಗ್ಯಾರಂಟಿ ಯೋಜನೆಗಳ  ಮೂಲಕ ಮತದಾರರಿಗೆ ಪ್ರಣಾಳಿಕೆಯಲ್ಲಿ ಹೇಳಿತ್ತು ಪ್ರಜಾಪ್ರತಿನಿಧಿ ಕಾಯ್ದೆಯ ಸೆಕ್ಷನ್‌ 123 (1) ಮತ್ತು ಸೆಕ್ಷನ್‌ 123 (2) ಪ್ರಕಾರ ಮತದಾರರ ಮೇಲೆ ಇದು ಪ್ರಭಾವ ಬೀರಿದ್ದು, ಇದು ಲಂಚಕ್ಕೆ ಸಮವಾಗಿದೆ. ಸೆಕ್ಷನ್‌ 123 (4)ರ ಪ್ರಕಾರ ಆಮಿಷವೊಡ್ಡಿ ಪ್ರಚಾರ ನಡೆಸುವುದು ಅಪರಾಧ. ಈ ಕಾರಣಕ್ಕೆ ಅಕ್ರಮ ಎಸಗಿದ್ದರಿಂದ ವರುಣಾ ಕ್ಷೇತ್ರದಿಂದ ಸಿದ್ದರಾಮಯ್ಯ ಶಾಸಕರಾಗಿ ಆಯ್ಕೆಯಾಗಿರುವುದನ್ನು ಅಸಿಂಧುಗೊಳಿಸಬೇಕು ಎಂದು ಅರ್ಜಿ ಸಲ್ಲಿಕೆಯಾಗಿತ್ತು.

ಮೈಸೂರಿನ ವರುಣಾ  ಹೋಬಳಿಯ ಕೂಡನಹಳ್ಳಿ ಗ್ರಾಮದ ಕೆ.ಎಂ.ಶಂಕರ ಅವರು ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿ ವಿಚಾರಣೆ ನಡೆಸಿದ ಕೋರ್ಟ್‌ ಸಿದ್ದರಾಮಯ್ಯನವರಿಗೆ ವಿವರಣೆ ನೀಡುವಂತೆ ಕೋರಿ ನೋಟಿಸ್‌ ಜಾರಿ ಮಾಡಿ ವಿಚಾರಣೆಯನ್ನು ಸೆಪ್ಟೆಂಬರ್‌ 1ಕ್ಕೆ ಮುಂದೂಡಿದೆ.

ಮೈಸೂರಿನ ವರುಣಾ  ಹೋಬಳಿಯ ಕೂಡನಹಳ್ಳಿ ಗ್ರಾಮದ ಕೆ.ಎಂ.ಶಂಕರ ಅವರು ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿ ವಿಚಾರಣೆ ನಡೆಸಿದ ಕೋರ್ಟ್‌ ಸಿದ್ದರಾಮಯ್ಯನವರಿಗೆ ವಿವರಣೆ ನೀಡುವಂತೆ ಕೋರಿ ನೋಟಿಸ್‌ ಜಾರಿ ಮಾಡಿ ವಿಚಾರಣೆಯನ್ನು ಸೆಪ್ಟೆಂಬರ್‌ 1ಕ್ಕೆ ಮುಂದೂಡಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 7483551849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version