ಸೌಜನ್ಯ ಪರ ಹಕ್ಕೊತ್ತಾಯ ಸಭೆಗೆ ಹೈಕೋರ್ಟ್ ತಾತ್ಕಾಲಿಕ ತಡೆಯಾಜ್ಞೆ!

ಬೆಳ್ತಂಗಡಿ: ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಪ್ರಿಲ್ 6ರಂದು ನಡೆಯಲಿದ್ದ ಜಾಥಾ ಹಾಗೂ ಹಕ್ಕೊತ್ತಾಯ ಸಭೆಗೆ ಹೈಕೋರ್ಟ್ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ.
ಏಪ್ರಿಲ್ 6ರಂದು ಧರ್ಮಸ್ಥಳದಿಂದ ಬೆಳ್ತಂಗಡಿವರೆಗೆ ಜಾಥಾ ಹಾಗೂ ಹಕ್ಕೊತ್ತಾಯ ಸಭೆ ನಡೆಸಲು ತೀರ್ಮಾನಿಸಲಾಗಿತ್ತು. ಆರಂಭದಲ್ಲಿ ಪ್ರತಿಭಟನೆಗೆ ಹೈಕೋರ್ಟ್ ಅನುಮತಿ ನೀಡಿತ್ತು. ಆದ್ರೆ, ವಾಟ್ಸಾಪ್ ಮೂಲಕ ರವಾನೆಯಾಗುತ್ತಿದ್ದ ಸಂದೇಶಗಳನ್ನು ಪರಿಶೀಲಿಸಿ, ಗಂಭೀರತೆ ಅರಿತು ಪ್ರತಿಭಟನೆಗೆ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ ಎಂದು ತಿಳಿದು ಬಂದಿದೆ.
ಆರಂಭದಲ್ಲಿ ಶಾಂತಿಯುತ ಪ್ರತಿಭಟನೆಗೆ ಹೈಕೋರ್ಟ್ ಅನುಮತಿ ನೀಡಿತ್ತು. ಆದರೆ ವಾಟ್ಸಾಪ್ ನಲ್ಲಿ ಹರಿದಾಡುತ್ತಿರುವ ಸಂದೇಶಗಳನ್ನು ಗಮನಿಸಿ ತಾತ್ಕಾಲಿಕವಾಗಿ ತಡೆಯಾಜ್ಞೆ ನೀಡಲಾಗಿದೆ. ಮುಂದಿನ ವಿಚಾರಣೆಯವರೆಗೆ ತಡೆಯಾಜ್ಞೆ ಜಾರಿಯಲ್ಲಿರಲಿದೆ.
ಧರ್ಮಸ್ಥಳದ ಪರವಾಗಿ ಹಿರಿಯ ನ್ಯಾಯವಾದಿ ಉದಯ ಹೊಳ್ಳ ಮತ್ತು ವಕೀಲ ರಾಜಶೇಖರ್ ಹಿಳಿಯಾರು ವಾದಿಸಿದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: