ಆರೋಗ್ಯ ಸೇತು ಆ್ಯಪ್ ಇಲ್ಲ ಎಂದು ನಾಗರಿಕರಿಗೆ ಸೇವೆ-ಸೌಲಭ್ಯ ನಿರಾಕರಿಸುವಂತಿಲ್ಲ | ಹೈಕೋರ್ಟ್
ಬೆಂಗಳೂರು: ಆರೋಗ್ಯ ಸೇತು ಆ್ಯಪ್ ಇಲ್ಲದ ಕಾರಣಕ್ಕೆ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಯಾವುದೇ ಅಂಗ ಸಂಸ್ಥೆಗಳು ನಾಗರಿಕರಿಗೆ ಸೌಲಭ್ಯ-ಸೇವೆಗಳನ್ನು ನಿರಾಕರಿಸುವಂತಿಲ್ಲ ಎಂದು ರಾಜ್ಯ ಹೈಕೋರ್ಟ್ ಹೇಳಿದೆ.
ಡಿಜಿಟಲ್ ಹಕ್ಕು ಹೋರಾಟಗಾರ ಅನಿವರ್ ಎ. ಅರವಿಂದ್ ಅವರು, ಆರೋಗ್ಯ ಸೇತು ಆ್ಯಪ್ ಕಡ್ಡಾಯದಿಂದ ಖಾಸಗಿ ಹಕ್ಕು ಮತ್ತು ಇತರೆ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗುತ್ತಿದೆ ಎಂದು ಅರ್ಜಿ ಸಲ್ಲಿಸಿದ್ದರು.
ಈ ಅರ್ಜಿಗೆ ಸಂಬಂಧಿಸಿದಂತೆ ಆದೇಶಿಸಿರುವ ಕೋರ್ಟ್, ಯಾವುದೇ ಸೌಲಭ್ಯಕ್ಕಾಗಿ ಆಪ್ ಬಳಕೆಗೆ ಒತ್ತಾಯ ಮಾಡುವಂತಿಲ್ಲ. ಈ ಬಗ್ಗೆ ಆಕ್ಷೇಪ ಸಲ್ಲಿಸಲು ಕೇಂದ್ರ ಸರ್ಕಾರಕ್ಕೆ ಕೊನೆಯ ಅವಕಾಶ ನೀಡಿ ವಿಚಾರಣೆಯನ್ನು ನವೆಂಬರ್ 10ಕ್ಕೆ ಮುಂದೂಡಿದೆ.
Disclaimer:
www.mahanayaka.in ಅಂತರ್ಜಾಲ ಮಾಧ್ಯಮದಲ್ಲಿ ಪ್ರಕಟವಾದ ಸುದ್ದಿಗಳಲ್ಲಿ ಯಾರದ್ದೇ ಭಾವನೆಗಳಿಗೆ ಧಕ್ಕೆಯಾಗುವಂತಹ ಅಥವಾ ನೋವುಂಟಾಗುವಂತಹ ಅಥವಾ ನಿಮಗೆ ಆಕ್ಷೇಪಾರ್ಹ ಎನಿಸಿದಂತಹ ಅಂಶಗಳ ಬಗ್ಗೆ ಓದುಗರು 9686872149 ನಂಬರ್ ಗೆ ಸುದ್ದಿಯ ಲಿಂಕ್ ಸಹಿತ ನಿಮ್ಮ ದೂರು ಸಲಹೆಗಳನ್ನು ವಾಟ್ಸಾಪ್ ಮಾಡಬಹುದು. ಅಥವಾ ಕರೆ ಮಾಡಬಹುದು. ನಿಮ್ಮ ದೂರನ್ನು ಪರಿಶೀಲಿಸಿ, ಅಂತಹ ಆಕ್ಷೇಪಾರ್ಹ ಅಂಶಗಳನ್ನು ತೆಗೆದು ಹಾಕಲು ಮಾಧ್ಯಮವು ಬದ್ಧವಾಗಿದೆ.