ಶಕ್ತಿ ಯೋಜನೆಯಿಂದ ತೊಂದರೆಯಾಗ್ತಿದೆ ಎಂದು ಅರ್ಜಿ ಸಲ್ಲಿಸಿದವರಿಗೆ ಹೈಕೋರ್ಟ್ ತರಾಟೆ - Mahanayaka
12:15 PM Sunday 16 - November 2025

ಶಕ್ತಿ ಯೋಜನೆಯಿಂದ ತೊಂದರೆಯಾಗ್ತಿದೆ ಎಂದು ಅರ್ಜಿ ಸಲ್ಲಿಸಿದವರಿಗೆ ಹೈಕೋರ್ಟ್ ತರಾಟೆ

high court
01/09/2023

ಬೆಂಗಳೂರು: ಶಕ್ತಿ ಯೋಜನೆಯಿಂದ ತೊಂದರೆಯಾಗ್ತಿದೆ ಎಂದು ಅರ್ಜಿಸಲ್ಲಿಸಿದ ಅರ್ಜಿದಾರರಿಗೆ ಎಂದವರಿಗೆ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.

ಯಾವ ಮಾರ್ಗದಲ್ಲಿ ಪ್ರಯಾಣಿಕರ ದಟ್ಟಣೆ ಇದೆ? ಸಾರ್ವಜನಿಕ ಸಾರಿಗೆಯಲ್ಲಿ ಇಷ್ಟೇ ಜನ ಪ್ರಯಾಣಿಸಬೇಕು ಎಂಬ ನಿಯಮವಿದೆಯೇ? ಮುಂಬೈ ಲೋಕಲ್ ರೈಲುಗಳ ದಟ್ಟಣೆಯ ಬಗ್ಗೆ ನಿಮಗೆ ಅರಿವಿದಿದ್ದಿದ್ರೆ ಅರ್ಜಿ ಸಲ್ಲಿಕೆ ಮಾಡುತ್ತಿರಲಿಲ್ಲ. ಅಧ್ಯಯನ ಮಾಡದೇ ಅರ್ಜಿ ಸಲ್ಲಿಸಿದ್ದೀರಿ ಹೀಗೆ ಹಲವು ಪ್ರಶ್ನೆಗಳನ್ನು ಮಾಡಿ ಅರ್ಜಿಯನ್ನು ಹಿಂಪಡೆಯಲು ಅನುಮತಿ ನೀಡುವುದಾಗಿ ಹೇಳಿದೆ.

ಶಕ್ತಿ ಯೋಜನೆಯಿಂದ ಸಾರ್ವಜನಿಕರಿಗೆ ತೊಂದರೆ ಆಗುತ್ತಿದೆ. ಅಲ್ಲದೇ ಆರ್ಥಿಕ ಹೊರೆಯಿಂದ ಇತರರಿಗೆ ತೊಂದರೆ ಆಗುತ್ತೆ ಎಂದು ಕಾನೂನು ವಿದ್ಯಾರ್ಥಿಗಳು ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಕ್ಕೆ ಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ. ವರಾಳೆ ಮತ್ತು ನ್ಯಾಯಮೂರ್ತಿ ಎಂಜಿಎಸ್ ಕಮಲ್ ಪೀಠ ಅರ್ಜಿದಾರರಿಗೆ ಬುದ್ಧಿವಾದ ಹೇಳಿದೆ.

ಇತ್ತೀಚಿನ ಸುದ್ದಿ