ಸಿನಿಮಾ ಮಂದಿರಗಳಲ್ಲಿ 200 ದರ ನಿಗದಿ:  ಸರ್ಕಾರದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ - Mahanayaka
7:22 AM Saturday 22 - November 2025

ಸಿನಿಮಾ ಮಂದಿರಗಳಲ್ಲಿ 200 ದರ ನಿಗದಿ:  ಸರ್ಕಾರದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ

movie
23/09/2025

ಬೆಂಗಳೂರು: ಮಲ್ಟಿಪ್ಲೆಕ್ಸ್‌ ಸೇರಿ ರಾಜ್ಯದ ಎಲ್ಲ ಚಿತ್ರಮಂದಿರಗಳಲ್ಲಿ ಎಲ್ಲಾ ಭಾಷೆಗಳ ಚಲನಚಿತ್ರಗಳ ಪ್ರದರ್ಶನಕ್ಕೆ ತೆರಿಗೆ ಹೊರತುಪಡಿಸಿ ಗರಿಷ್ಠ 200 ಮೊತ್ತದ ಏಕರೂಪ ದರ ನಿಗದಿ ಪಡಿಸಿ ರಾಜ್ಯ ಸರ್ಕಾರ ತಂದಿರುವ ನಿಯಮಕ್ಕೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.

ಈ ಸಂಬಂಧ ಅರ್ಜಿಗಳ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ಮಧ್ಯಂತರ ಆದೇಶವನ್ನು ನ್ಯಾಯಮೂರ್ತಿ ರವಿ ಹೊಸಮನಿ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ಪ್ರಕಟಿಸಿದೆ.

ಟಿಕೆಟ್‌ ದರ ನಿಗದಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಜಾರಿಗೆ ತಂದಿರುವ ‘ಕರ್ನಾಟಕ ಸಿನಿಮಾ, ನಿಯಂತ್ರಣ ಮತ್ತು ತಿದ್ದುಪಡಿ ನಿಯಮಗಳು–2025’ ಅನ್ನು ಪ್ರಶ್ನಿಸಿ, ಚಿತ್ರ ನಿರ್ಮಾಣ ಸಂಸ್ಥೆಯಾದ ಹೊಂಬಾಳೆ ಫಿಲ್ಟ್, ಮಲ್ಟಿಪ್ಲೆಕ್ಸ್ ಅಸೋಸಿಯೇಷನ್‌ ಆಫ್ ಇಂಡಿಯಾದ ಪ್ರತಿನಿಧಿ ಶುಭಂ ಠಾಕೂರ್, ಪಿವಿಆರ್ ಐನಾಕ್ಸ್‌ ಲಿಮಿಟೆಡ್‌ ನ ಷೇರುದಾರ ಶಂತನು ಪೈ, ಕೀಸ್ಟೋನ್ ಎಂಟರ್‌ ಟೈನ್‌ ಮೆಂಟ್‌ ಹಾಗೂ ವಿ.ಕೆ.ಫಿಲ್ಸ್ ಈ ರಿಟ್ ಅರ್ಜಿಗಳನ್ನು ಸಲ್ಲಿಸಿವೆ.

ಮಲ್ಟಿಪ್ಲೆಕ್ಸ್ ಸೇರಿದಂತೆ ಚಿತ್ರಮಂದಿರಗಳಿಗೆ 7200 ನಿಗದಿಪಡಿಸಿರುವ ಸರ್ಕಾರದ ನಿರ್ಧಾರ ಏಕಪಕ್ಷೀಯ, ಕಾನೂನು ಬಾಹಿರ ಮತ್ತು ವಿವೇಚನಾರಹಿತವಾಗಿದೆ. ಸಂವಿಧಾನದ ಸಮಾನತೆ, ಅಭಿವ್ಯಕ್ತಿ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ. ಸರ್ಕಾರ 2017ರಲ್ಲಿಯೂ ಇದೇ ರೀತಿಯ ಆದೇಶ ಹೊರಡಿಸಿತ್ತು. ಆ ಆದೇಶವನ್ನು ಹೈಕೋರ್ಟ್‌ ರದ್ದುಪಡಿಸಿದ ನಂತರ ಆ ಆದೇಶವನ್ನು ವಾಪಸ್ ಪಡೆಯಲಾಗಿತ್ತು ಎಂದು ಅರ್ಜಿದಾರರು ವಿವರಿಸಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ