ಹೈಟೆಕ್​​​ ವೇಶ್ಯಾವಾಟಿಕೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ - Mahanayaka

ಹೈಟೆಕ್​​​ ವೇಶ್ಯಾವಾಟಿಕೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ

manglore
09/03/2022


Provided by

ಮಂಗಳೂರು: ಕಾಲೇಜು ಯುವತಿಯರನ್ನು ಬಳಸಿಕೊಂಡು ಹೈಟೆಕ್ ವೇಶ್ಯಾವಾಟಿಕೆ ನಡೆಸುತ್ತಿದ್ದ ಪ್ರಕರಣದಲ್ಲಿ, ಮತ್ತೋರ್ವ ಅಪ್ರಾಪ್ತ ವಿದ್ಯಾರ್ಥಿನಿಯನ್ನು ಬಳಸಿಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದ ನಾಲ್ವರು ಆರೋಪಿಗಳನ್ನು ಬಂಧಿಸಿರುವ ಘಟನೆ ವರದಿಯಾಗಿದೆ.

ರಶೀದ್ ಸಾಹೇಬ್ (73), ಮಹಮ್ಮದ್ ಅಲಿ (74), ಗ್ರೆಗರಿ ಲಿಯೋನಾರ್ಡ್ ಸಿಕ್ವೇರಾ (62) ಹಾಗೂ ಇಸ್ಮಾಯಿಲ್​ (41) ಬಂಧಿತ ಆರೋಪಿಗಳಗಿದ್ದಾರೆ. ‌ ನಾಲ್ವರು ಆರೋಪಿಗಳು ಈ ಪ್ರಕರಣದಲ್ಲಿ ಗ್ರಾಹಕರ ರೀತಿ ಬಂದು ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡುತ್ತಿದ್ದು, ಆರೋಪಿಗಳನ್ನು ಪೋಕ್ಸೊ ಪ್ರಕರಣ ದಾಖಲಿಸಿ ಪೊಲೀಸರು ಬಂಧಿಸಿದ್ದಾರೆ.

ಮಂಗಳೂರಿನ ನಂದಿಗುಡ್ಡ ರಿಯಾನ ರೆಸಿಡೆನ್ಸಿ ಅಪಾರ್ಟ್‌ಮೆಂಟ್​ ನ ಪೆಂಟ್​​ಹೌಸ್​ ನಲ್ಲಿ ಆರೋಪಿಗಳು ಹೈಟೆಕ್ ವೇಶ್ಯಾವಾಟಿಕೆ ನಡೆಸುತ್ತಿದ್ದರು. ಈ ಹಿಂದೆಯೇ ಪೊಲೀಸರು ಓರ್ವ ಅಪ್ರಾಪ್ತ ವಿದ್ಯಾರ್ಥಿನಿ ಸೇರಿದಂತೆ ನಾಲ್ವರು ಸಂತ್ರಸ್ತೆಯರನ್ನು ರಕ್ಷಿಸಿದ್ದರು.

ಈ ಪ್ರಕರಣವನ್ನು ಕೈಗೆತ್ತಿಕೊಂಡ ಮಂಗಳೂರು ಸಿಸಿಬಿ ಪೊಲೀಸರು, ತನಿಖೆ ಚುರುಕುಗೊಳಿಸಿದ್ದರು. ಪರಿಣಾಮ ಆರೋಪಿಗಳು ಮತ್ತೋರ್ವ ಅಪ್ರಾಪ್ತೆಯನ್ನು ವೇಶ್ಯಾವಾಟಿಕೆಗೆ ಬಳಿಸಿಕೊಂಡಿರುವ ವಿಚಾರ ಬೆಳಕಿಗೆ ಬಂದಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

 ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳ: ಮಗ – ತಂದೆ ಇಬ್ಬರೂ ಸಾವಿಗೆ ಶರಣು

ದುಬೈನಲ್ಲಿ ಕೇರಳದ ಖ್ಯಾತ ಆಲ್ಬಂ ಸ್ಟಾರ್ ಅನುಮಾನಸ್ಪದವಾಗಿ ಸಾವು

ದಳಪತಿ ವಿಜಯ್ ಜೊತೆಗೆ ನಟಿಸಲಿದ್ದಾರಾ ರಶ್ಮಿಕಾ ಮಂದಣ್ಣ?

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ | ಕೇಂದ್ರ ಇಂಧನ ಸಚಿವರು ಜನರಿಗೆ ನೀಡಿದ ಸ್ಪಷ್ಟನೆ ಏನು?

ಮಹಿಳಾ ದಿನಾಚರಣೆಯಂದೇ ಹೀನ ಕೃತ್ಯ: ವಿದೇಶಿ ಮಹಿಳೆಯ ಅತ್ಯಾಚಾರಕ್ಕೆ ಯತ್ನ

 

ಇತ್ತೀಚಿನ ಸುದ್ದಿ