8:20 AM Thursday 16 - October 2025

ಹಿಜಾಬ್-ಕೇಸರಿ ಪೈಟ್ ನಡುವೆ ಎಂಟ್ರಿಯಾದ ನೀಲಿ: ನೀಲಿ ಶಾಲು ಧರಿಸಿ ಬಂದ ವಿದ್ಯಾರ್ಥಿಗಳು

jai bheem students
07/02/2022

ಚಿಕ್ಕಮಗಳೂರು: ಹಿಜಾಬ್ ಹಾಗೂ ಕೇಸರಿ ವಿವಾದದ ನಡುವೆಯೇ ನೀಲಿ ಶಾಲು ಧರಿಸಿ ಬಂದ ಸಂವಿಧಾನ ಪರ ವಿದ್ಯಾರ್ಥಿ ಸಂಘಟನೆಗಳ ವಿದ್ಯಾರ್ಥಿಗಳು ಜೈ ಭೀಮ್ ಘೋಷಣೆ ಕೂಗುವ ಮೂಲಕ ಕಾಲೇಜ್ ಕ್ಯಾಂಪಸ್ ನೊಳಗಿನ ರಾಜಕೀಯವನ್ನು ವಿರೋಧಿಸಿದರು.

ಹಿಜಾಬ್ ವಿವಾದವು ಒಂದು ರಾಜಕೀಯವಾಗಿದ್ದು, ಸಮುದಾಯವೊಂದರ ವಿದ್ಯಾರ್ಥಿನಿಯರ ಶಿಕ್ಷಣದ ಹಕ್ಕನ್ನು ಕಸಿಯುವ ಹುನ್ನಾರವಾಗಿದೆ. ಹಿಜಾಬ್ ಪ್ರಕರಣ ನ್ಯಾಯಾಲಯದಲ್ಲಿದ್ದು, ತೀರ್ಪು ಬರುವವರೆಗೂ  ಹಿಜಾಬ್ ವಿಚಾರದಲ್ಲಿ ಯಥಾಸ್ಥಿತಿ ಕಾಪಾಡಬೇಕು ಎಂದು ವಿದ್ಯಾರ್ಥಿಗಳು ಒತ್ತಾಯಿಸಿದರು.

ಇದೇ ವೇಳೆ ನೀಲಿ ಶಾಲು ಧರಿಸಿ ಬಂದ ವಿದ್ಯಾರ್ಥಿಗಳ ಎದುರು ಕೇಸರಿ ಶಾಲಿನೊಂದಿಗೆ ಬಂದ ವಿದ್ಯಾರ್ಥಿಗಳ ಗುಂಪು ಜೈಶ್ರೀರಾಮ್ ಘೋಷಣೆ ಕೂಗಿದ್ದು, ಈ ವೇಳೆ ನೀಲಿ ಶಾಲು ಧರಿಸಿದ ವಿದ್ಯಾರ್ಥಿಗಳು ಜೈ ಭೀಮ್ ಘೋಷಣೆ ಕೂಗಿದ್ದಾರೆ. ಕೆಲ ಕಾಲ ಸ್ಥಳದಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಗಿದೆ. ಈ ವೇಳೆ ಸ್ಥಳಕ್ಕೆ ಬಂದ ಪೊಲೀಸರು ಪರಿಸ್ಥಿತಿ ನಿಯಂತ್ರಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಕೇಸರಿ ಶಾಲು ಧರಿಸಿ ಕಾಲೇಜಿಗೆ ಬಂದ ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿಗಳು

ಕಲಾವಿದೆಯರನ್ನು ವೇಶ್ಯಾವಾಟಿಕೆಗೆ ಪ್ರಚೋದಿಸಿದ ಆರ್ಕೇಸ್ಟ್ರಾ ಮಾಲಕ: ದೂರು ದಾಖಲು

ವಿಚ್ಛೇದನ ನೀಡಿಲ್ಲವೆಂದು ಪ್ರೀತಿಸಿ ಮದುವೆಯಾದವಳನ್ನೇ ಕೊಲೆಗೈದ ಪತಿ

ಬ್ರಾಹ್ಮಣ ಅನ್ನೋದು ಜಾತಿಯಲ್ಲ, ಅದು ಉನ್ನತ ಜೀವನ ವಿಧಾನ: ಬಿಜೆಪಿ ಹಿರಿಯ ನಾಯಕ ದಿನೇಶ್ ಶರ್ಮಾ

6 ವರ್ಷದಿಂದ ಪತಿಯ ಊಟದಲ್ಲಿ ಡ್ರಗ್ಸ್ ಬೆರೆಸುತ್ತಿದ್ದ ಪತ್ನಿಯ ಬಂಧನ

ಇತ್ತೀಚಿನ ಸುದ್ದಿ

Exit mobile version