ಹಿಜಾಬ್: ಸುಪ್ರೀಂಕೋರ್ಟ್ ತೀರ್ಪಿನ ಹಿನ್ನೆಲೆ ಉಡುಪಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ - Mahanayaka

ಹಿಜಾಬ್: ಸುಪ್ರೀಂಕೋರ್ಟ್ ತೀರ್ಪಿನ ಹಿನ್ನೆಲೆ ಉಡುಪಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್

udupi
13/10/2022

ಹಿಜಾಬ್ ವಿಚಾರಕ್ಕೆ ಸಂಬಂಧಿಸಿ ಸುಪ್ರೀಂಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಾದ್ಯಂತ ಹಲವು ಕಾಲೇಜುಗಳಿಗೆ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ.

ವಿವಾದದ ಕೇಂದ್ರಬಿಂದು ಆಗಿರುವ ಉಡುಪಿ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು, ಉಡುಪಿ ಅಜ್ಜರಕಾಡು ಮಹಿಳಾ ಪದವಿ ಕಾಲೇಜು, ಉಡುಪಿ ಎಂಜಿಎಂ ಕಾಲೇಜು ಹಾಗೂ ಕುಂದಾಪುರ ಸರಕಾರಿ ಪದವಿ ಪೂರ್ವ ಕಾಲೇಜು ಸೇರಿದಂತೆ ಹಲವು ಕಾಲೇಜುಗಳಿಗೆ ಪೊಲೀಸ್ ಭದ್ರತೆ ಒದಗಿಸಲಾಗಿದೆ.

ಸ್ಥಳಕ್ಕೆ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಅಕ್ಷಯ್ ಮಚ್ಚೇಂದ್ರ ಹಾಕೆ ಭೇಟಿ ನೀಡಿ ಭದ್ರತೆ ಪರಿಶೀಲನೆ ನಡೆಸಿದರು.  ಹಿಜಾಬ್ ವಿಚಾರದಲ್ಲಿ ವಿವಾದ ಉಂಟಾದ ಕೆಲವು ಸೂಕ್ಷ್ಮ ಪ್ರದೇಶಗಳ ಕಾಲೇಜುಗಳಿಗೆ ಬಿಗಿ ಬಂದೋಬಸ್ತ್ ಒದಗಿಸಲಾಗಿದೆ. ಯಾವುದೇಅಹಿತಕರ ಘಟನೆ ಸಂಭವಿಸದಂತೆ ಹಾಗೂ  ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮ ವಹಿಸಲಾಗಿದೆ ಎಂದು ಎಸ್ಪಿ ಅಕ್ಷಯ್ ಎಂ ಹಾಕೆ ತಿಳಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ