11:11 PM Tuesday 14 - October 2025

ಹಿಜಾಬ್ ತೀರ್ಪು: ಬಂದ್ ಕರೆ ನೀಡಿದವರ ವಿರುದ್ದ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಿಕೊಳ್ಳಲು ಅರ್ಜಿ ಸಲ್ಲಿಕೆ

arji 1
22/03/2022

ಬೆಂಗಳೂರು: ಹಿಜಾಬ್ ವಿಚಾರಕ್ಕೆ ಸಂಬಂಧಿಸಿ ಹೈಕೋರ್ಟ್ ನೀಡಿದ್ದ ತೀರ್ಪಿಗೆ ಅಸಮಾಧಾನ ವ್ಯಕ್ತಪಡಿಸಿ ಬಂದ್‌ಗೆ ಕರೆ ನೀಡಿದ್ದ ಕೆಲ ಸಂಘಟನೆಗಳ ವಿರುದ್ಧ ಸ್ವಯಂ ಪ್ರೇರಿತ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಬೇಕೆಂದು ಕೋರಿ ಹೈಕೋರ್ಟ್ ವಕೀಲರೊಬ್ಬರು ರಿಜಿಸ್ಟ್ರಾರ್ ಜನರಲ್‌ಗೆ ಮನವಿ ಮಾಡಿ ಅರ್ಜಿ ಸಲ್ಲಿಸಿದ್ದಾರೆ.

ಕೆಲವು ದಿನಗಳ ಹಿಂದಷ್ಟೇ ಹೈಕೋರ್ಟ್, ಹಿಜಾಬ್ ಇಸ್ಲಾಂನ ಅತ್ಯಗತ್ಯ ಭಾಗವಲ್ಲ, ಶಾಲಾ-ಕಾಲೇಜುಗಳಲ್ಲಿ ಕಡ್ಡಾಯವಾಗಿ ಸಮವಸ್ತ್ರ ಪಾಲನೆ ಮಾಡಬೇಕು ಎಂದು ತೀರ್ಪು ನೀಡಿತ್ತು. ಆದರೆ, ಈ ತೀರ್ಪು ಕುರಿತು ಅಸಮಾಧಾನ ವ್ಯಕ್ತಪಡಿಸಿ ಕೆಲವು ಸಂಘಟನೆಗಳು ಕರ್ನಾಟಕ ಬಂದ್ ಗೆ ಕರೆ ನೀಡಿದ್ದರು. ಅಲ್ಲದೆ, ಕೆಲವರು ತೀರ್ಪು ನೀಡಿದ್ದ ನ್ಯಾಯಾಧೀಶರ ವಿರುದ್ಧವೇ ಮಾತನಾಡಿದ್ದರು. ಈ ನಿಟ್ಟಿನಲ್ಲಿ ಬಂದ್ ಕರೆ ಕೊಟ್ಟ ಸಂಘಟನೆಗಳ ಮೇಲೆ ಸ್ವಯಂ ಪ್ರೇರಿತವಾಗಿ ನ್ಯಾಯಾಂಗ ನಿಂದನೆ ದೂರು ದಾಖಲಿಸಬೇಕೆಂದು ಕೋರಿ ನ್ಯಾಯವಾದಿ ಎನ್.ಪಿ. ಅಮೃತೇಶ್ ಅವರು ಅರ್ಜಿ ಸಲ್ಲಿಸಿದ್ದಾರೆ.

ನ್ಯಾಯಾಲಯದ ಘನತೆ ಕುಂದಿಸುವ ಕೆಲಸ ಮಾಡಲಾಗಿದೆ. ನ್ಯಾಯಾಧೀಶರ ಬಗ್ಗೆ ಆಕ್ಷೇಪಾರ್ಹ ರೀತಿಯಲ್ಲಿ ಮಾತನಾಡಿದ್ದಲ್ಲದೆ, ಕೆಲವರು ತೀರ್ಪು ನೀಡಿದ ನ್ಯಾಯಾಧೀಶರಿಗೆ ಕೊಲೆ ಬೆದರಿಕೆ ಹಾಕಿದ್ದಾರೆ. ಈ ಎಲ್ಲಾ ಕಾರಣ ಮುಂದಿಟ್ಟು ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಿಕೊಳ್ಳಬೇಕೆಂದು ಮನವಿ ಮಾಡಲಾಗಿದೆ.

ಬಂದ್‌ಗೆ ಕರೆ ನೀಡಿರುವ ಕರ್ನಾಟಕ ವಿದ್ಯಾರ್ಥಿ ಸಂಘಟನೆ, ಕರ್ನಾಟಕ ಭಾರತೀಯ ವಿದ್ಯಾರ್ಥಿ ಇಸ್ಲಾಮಿಕ್ ಸಂಘಟನೆ, ಸ್ಟೂಡೆಂಟ್ ಕ್ರಿಶ್ಚಿಯನ್ ಮೂವ್ ಮೆಂಟ್ ಆಫ್ ಇಂಡಿಯಾ, ಕರ್ನಾಟಕ ದಲಿತ ವಿದ್ಯಾರ್ಥಿ ಪರಿಷತ್, ಬೆಂಗಳೂರಿನ ಕಲೆಕ್ಟಿವ್, ಕರ್ನಾಟಕ ವಿದ್ಯಾರ್ಥಿನಿ ಇಸ್ಲಾಮಿಕ್ ಸಂಘಟನೆ, ಕರ್ನಾಟಕ ಸಗೀರ್ ಅಹ್ಮದ್ ರಶ್ದಿ ಇಮರತ್ ಇ- ಶರಿಯತ್ ಸಹಿತ ಏಳು ಸಂಘಟನೆಗಳ ಮೇಲೆ ಕ್ರಮ ಕೈಗೊಳ್ಳಬೇಕೆಂದು ನ್ಯಾಯವಾದಿ ಎನ್.ಪಿ. ಅಮೃತೇಶ್ ಅರ್ಜಿಯಲ್ಲಿ ಕೋರಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/FZkISFWKknBDvdYkMVFArW

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಆಘಾತಕಾರಿ ಘಟನೆ: 2 ತಿಂಗಳ ಹೆಣ್ಣು ಮಗವನ್ನು ಕೊಲೆಗೈದು ಒಲೆಗೆಸೆದ ತಾಯಿ

ಮತ್ತೆ ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ 50 ರೂ. ಏರಿಕೆ

ಬಿಗ್‌ ಶಾಕ್‌: ಭಾರೀ ಏರಿಕೆ ಕಂಡ ಪೆಟ್ರೋಲ್, ಡೀಸೆಲ್ ಬೆಲೆ

ಆದಾಯಕ್ಕಿಂತ ಹೆಚ್ಚು ಆಸ್ತಿ ಸಂಪಾದನೆ ಆರೋಪ: ವಿಜಯನಗರ ಪೊಲೀಸ್​ ಇನ್ಸ್​ಪೆಕ್ಟರ್ ಅಮಾನತು

ಇತ್ತೀಚಿನ ಸುದ್ದಿ

Exit mobile version