ಕಳಸದ ಚನ್ನಹಡ್ಲು ಗ್ರಾಮದಲ್ಲಿ ಗುಡ್ಡ ಕುಸಿತ

04/07/2025
ಚಿಕ್ಕಮಗಳೂರು: ಮಲೆನಾಡಲ್ಲಿ ಗಾಳಿ–ಮಳೆ ಅಬ್ಬರ ಮುಂದುವರಿದಿದೆ. ಭಾರೀ ಮಳೆ ಹಿನ್ನೆಲೆ ಕಳಸ ತಾಲೂಕಿನ ಚನ್ನಹಡ್ಲು ಗ್ರಾಮದಲ್ಲಿ ಗುಡ್ಡ ಕುಸಿತವಾಗಿದೆ.
ಗುಡ್ಡ ಕುಸಿತದಿಂದ ಕಳಸ ತಾಲೂಕಿನ ಜನರಲ್ಲಿ ಆತಂಕ ಸೃಷ್ಟಿಯಾಗಿದೆ. 2019ರಲ್ಲೂ ಚನ್ನಹಡ್ಲು ಗ್ರಾಮದಲ್ಲಿ ಗುಡ್ಡ ಕುಸಿದಿತ್ತು. ಗುಡ್ಡ ಕುಸಿತದಿಂದ ಹಿರೇಬೈಲು, ಮಲ್ಲೇಶನಗುಡ್ಡ ಸೇರಿ ಹಲವು ಗ್ರಾಮಗಳ ಸಂಪರ್ಕ ಕಡಿತವಾಗಿದೆ.
ಭಾರೀ ಗಾಳಿ–ಮಳೆಗೆ ಕಳಸ ತಾಲೂಕಿನ ಜನರಲ್ಲಿ ಆತಂಕ ಸೃಷ್ಟಿಯಾಗಿದ್ದು, ಗುಡ್ಡ ಕುಸಿದು ರಸ್ತೆಗೆ ಬಂದು ಕೂತ ಸ್ಥಿತಿಯಲ್ಲಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD