ಮಂಗಳೂರು: ಭಾರೀ ಮಳೆಗೆ ಕೋರ್ಟ್ ಆವರಣದ ಬಳಿ ಗುಡ್ಡ ಕುಸಿತ

ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿನ್ನೆ ರಾತ್ರಿಯಿಂದ ಭಾರೀ ಮಳೆ ಸುರಿಯುತ್ತಿದೆ. ಇದರ ಪರಿಣಾಮವಾಗಿ ಮಂಗಳೂರು ನಗರದ ಪಿ.ವಿ.ಎಸ್ ವೃತ್ತದಿಂದ ಬಿಜೆಪಿ ಆಫೀಸ್ ಮುಂಭಾಗದಿಂದ ಹಂಪನಕಟ್ಟೆ ಬರುವ ಕೈಬರ್ ಪಾಸ್ ಲೇನ್ನ ರಸ್ತೆಯಲ್ಲಿ ಗುಡ್ಡ ಕುಸಿದಿದೆ.
ಗುಡ್ಡ ಕುಸಿದ ಮೇಲ್ಭಾಗದಲ್ಲಿ ಕೋರ್ಟ್ ಆವರಣ ಮತ್ತು ರಸ್ತೆ ಇದ್ದು ನೂರಾರು ವಾಹನಗಳು ನಿತ್ಯ ಈ ಮಾರ್ಗಲ್ಲಿ ಸಂಚರಿಸುತ್ತಿವೆ. ಇದೀಗ ಈ ಭಾಗದಲ್ಲಿ ಭೂಕುಸಿತ ಉಂಟಾದ ಕಾರಣ ಸಂಚಾರಕ್ಕೆ ಅಲ್ಪ ಪ್ರಮಾಣದಲ್ಲಿ ತೊಂದರೆಯಾಗಿದೆ. ಮತ್ತಷ್ಟು ಭೂ ಕುಸಿತ ಉಂಟಾದ್ರೆ ಕೋರ್ಟ್ ರಸ್ತೆ ಪ್ರದೇಶ ಕುಸಿಯುವ ಆತಂಕ ಎದುರಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/D73015iu7jn2glm2MECosd
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw