ಗಡಿಯಾರ ಸರಕಾರಿ ಶಾಲೆಯ ಬಳಿ ಗುಡ್ಡ ಕುಸಿತ: ಶಾಲೆಗೆ ರಜೆ

ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ ಪೊಲೀಸ್ ಠಾಣೆ ವ್ಯಾಪ್ತಿಯ ಮಾಣಿ ಸಮೀಪದ ರಾಷ್ಟ್ರೀಯ ಹೆದ್ದಾರಿಗೆ ತಾಗಿಕೊಂಡಿರುವ ಗಡಿಯಾರ ಸರಕಾರಿ ಶಾಲೆಯ ಬಳಿ ಗುಡ್ಡ ಕುಸಿತ ಉಂಟಾಗಿದೆ.
ಇದರಿಂದ ಅಪಾಯಕಾರಿ ಸನ್ನಿವೇಶ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಇಲ್ಲಿನ ಶಾಲೆಗೆ ರಜೆ ಘೋಷಣೆ ಮಾಡಲಾಗಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಬಿ.ಸಿ.ರೋಡು – ಅಡ್ಡಹೊಳೆ ಚತುಷ್ಪಥ ಹೆದ್ದಾರಿ ಕಾಮಗಾರಿ ನಡೆಯುವ ವೇಳೆ ಶಾಲೆಯ ಕಟ್ಟಡದ ಅಂಚಿನ ತನಕ ಅಗೆಯಲಾಗಿದೆ.
ಮಣ್ಣು ಅಗೆದ ಪರಿಣಾಮವಾಗಿ ಇದೀಗ ಗುಡ್ಡ ಕುಸಿತವಾಗಿದೆ. ಗುಡ್ಡ ಕುಸಿತದಿಂದಾಗಿ ಶಾಲೆಯ ಬಳಿ ನಿರ್ಮಿಸಲಾಗಿರುವ ವಿದ್ಯುತ್ ಸ್ಥಾವರ ಘಟಕ ಮತ್ತು ಹೈಟೆನ್ಶನ್ ವಿದ್ಯುತ್ ಕಂಬವು ಅಪಾಯಕಾರಿ ಸ್ಥಿತಿಯಲ್ಲಿದ್ದು, ಕುಸಿಯುವ ಭೀತಿ ಉಂಟಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/D73015iu7jn2glm2MECosd
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw