ಮನೆ ಮೇಲೆ ಕುಸಿದು ಬಿದ್ದ ಗುಡ್ಡ: ಮಹಿಳೆ ಸಾವು, ಪತಿಗೆ ಗಂಭೀರ ಗಾಯ - Mahanayaka

ಮನೆ ಮೇಲೆ ಕುಸಿದು ಬಿದ್ದ ಗುಡ್ಡ: ಮಹಿಳೆ ಸಾವು, ಪತಿಗೆ ಗಂಭೀರ ಗಾಯ

ullala
30/05/2025


Provided by

ಉಳ್ಳಾಲ: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಎಡೆಬಿಡದೇ ಮಳೆ ಸುರಿಯುತ್ತಿದ್ದು, ಮಳೆಯ ಪರಿಣಾಮ ಎರಡು ಮನೆಗಳ ಮೇಲೆ ಗುಡ್ಡ ಕುಸಿದು ಬಿದ್ದ ಪರಿಣಾಮ ಒಬ್ಬರು ಮಹಿಳೆ ಸಾವನ್ನಪ್ಪಿರುವ ಘಟನೆ ಮಂಜನಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದಿದೆ.

ಮೊಂಟೆ ಪದವು ಸಮೀಪದ ಕೋಡಿ ಎಂಬಲ್ಲಿ ಈ ದುರ್ಘಟನೆ ನಡೆದಿದೆ. ಮೃತಪಟ್ಟವರನ್ನು ಪ್ರೇಮ(50) ಎಂದು ಗುರುತಿಸಲಾಗಿದೆ.  ಘಟನೆಯಲ್ಲಿ ಮಹಿಳೆಯ ಪತಿ ಕಾಂತಪ್ಪ ಪೂಜಾರಿ ಎಂಬವರಿಗೆ ಕಾಲಿಗೆ ಗಂಭೀರವಾಗಿ ಗಾಯವಾಗಿದೆ.

ಘಟನೆಯಲ್ಲಿ ನಾಲ್ವರು ಮಣ್ಣಿನಡಿಯಲ್ಲಿ ಸಿಲುಕಿದ್ದಾರೆ ಎಂದು ಹೇಳಲಾಗಿದೆ. ಕಾರ್ಯಾಚರಣೆ ನಡೆಯುತ್ತಿದೆ. ಘಟನಾ ಸ್ಥಳಕ್ಕೆ ಎನ್ ಡಿಆರ್ ಎಫ್, ಎಸ್ ಡಿಆರ್ ಎಫ್ ಹಾಗೂ ಉಳ್ಳಾಲ ತಹಶೀಲ್ದಾರ್ ಪುಟ್ಟರಾಜು ಕಂದಾಯ ನಿರೀಕ್ಷಕ ಪ್ರಮೋದ್ ಸೇರಿದಂತೆ ಹಲವು  ಅಧಿಕಾರಿಗಳು ಆಗಮಿಸಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ